ಭಾರೀ ಮಳೆ 15 ಜಿಲ್ಲೆಗಳಲ್ಲಿ ಹೈ ಅಲರ್ಟ್

ಭಾರೀ ಮಳೆ 15 ಜಿಲ್ಲೆಗಳಲ್ಲಿ ಹೈ ಅಲರ್ಟ್

ಬೆಳಗಾವಿ, ಅ. 22: ಭಾರೀ ಮಳೆಯಿಂದ ಕೃಷ್ಣಾ ನದಿಯ ತಟದ ಊರುಗಳಲ್ಲಿ ಪ್ರವಾಹ ಉಂಟಾಗಿತ್ತು. ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿ, ವಿಜಯಪುರ ಭಾಗದಲ್ಲಿ ಜನರು ಜಮೀನು, ಮನೆ ಕಳೆದುಕೊಂಡಿದ್ದರು. ಪ್ರವಾಹ ಪೀಡಿತರಿಗೆ ಸರ್ಕಾರದಿಂದ ಸರಿಯಾದ ಸಮಯದಲ್ಲಿ ಪರಿಹಾರ ಸಿಗದೆ ಜನರು ಪರದಾಡಿದ್ದರು. ಇನ್ನೇನು ಪರಿಸ್ಥಿತಿ ಸುಧಾರಿಸುತ್ತಿದೆ ಎನ್ನುವಷ್ಟರಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ರಾಜ್ಯದಲ್ಲಿ ಇನ್ನೂ 3ರಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ 15 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.

ಮಲಪ್ರಭಾ ನದಿಯಲ್ಲಿ ಹೆಚ್ಚಾದ ಪ್ರವಾಹದಿಂದ ಬಾದಾಮಿಯ 40 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಶಿವಯೋಗ ಮಂದಿರ ಬಳಿ ಸೇತುವೆ ಮುಳುಗಡೆಯಾಗಿದ್ದು, 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇದರಿಂದಾಗಿ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಚೊಳಚಗುಡ್ಡ ಸೇತುವೆ ಜಲಾವೃತವಾಗಿ ಸಂಚಾರ ಬಂದ್ ಆಗಿದೆ. ಗದಗ-ಬಾಗಲಕೋಟೆ ಸಂಪರ್ಕಿಸೋ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ಇದರಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos