ಹೈಟೆಕ್ ಬಸ್ ನಿಲ್ದಾಣ

ಹೈಟೆಕ್ ಬಸ್ ನಿಲ್ದಾಣ

ತುಮಕೂರು, ಡಿ. 3: ಬಸ್ ನಿಲ್ದಾಣದಿಂದ ರಾಜ್ಯದ ವಿವಿಧೆಡೆಗೆ ನಿತ್ಯ ಸುಮಾರು 2,992 ಬಸ್‌ಗಳು ಸಂಚರಿಸುತ್ತವೆ ರಾಜ್ಯದ ಬಹುತೇಕ ಜಿಲ್ಲೆಗಳಿಗೂ ಈ ನಿಲ್ದಾಣ ಸಂಪರ್ಕ ಕೊಂಡಿಯಂತಿದೆ. ಬಸ್ ನಿಲ್ದಾಣ ಮೂಲ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿತ್ತು. ಸಮರ್ಪಕ ಶೌಚಾಲಯ ವ್ಯವಸ್ಥೆ, ತಂಗಲು ಕೊಠಡಿಗಳಿಲ್ಲದೆ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಮನಗಂಡು ಸ್ಮಾರ್ಟ್ ಸಿಟಿ ಯೋಜನೆಯಡಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ.

ನಗರದ ಜೆ.ಸಿ.ರಸ್ತೆ, ಪ್ರಶಾಂತ್ ಚಿತ್ರಮಂದಿರ ಬಳಿ, ಅಶೋಕ ರಸ್ತೆಗಳ ಬದಿಯಲ್ಲಿರುವ ತಳ್ಳುಗಾಡಿ ಅಂಗಡಿ, ಹಣ್ಣಿನ ಅಂಗಡಿ ಸೇರಿದಂತೆ ಇತರ ಅಂಗಡಿಗಳನ್ನು ಮಹನಗರ ಪಾಲಿಕೆಯಿಂದ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಅಶೋಕ ರಸ್ತೆಯಿಂದ ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಪ್ರವೇಶಿಸುವ ದ್ವಾರದ ಬಲಬದಿಯಲ್ಲಿ ತೆರೆದ ಚರಂಡಿಗಳಿವೆ. ವಾಹನಗಳ ಸುಗಮ ಸಂಚಾರಕ್ಕೆ ಅನುವಾಗುವಂತೆ ಚರಂಡಿಗಳ ಮೇಲ್ಭಾಗದಲ್ಲಿ ಸ್ಲಾಬ್ ಗಳನ್ನು ಅಳವಡಿಸಲಾಗುತ್ತಿದೆ.

ಪಾರ್ಕಿಂಗ್ ವ್ಯವಸ್ಥೆ

ತಾತ್ಕಾಲಿಕ ಬಸ್ ನಿಲ್ದಾಣದ ಎರಡೂ ಕಡೆ ದ್ವಿಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಸುಮಾರು ೨೦೦ರಿಂದ ೩೦೦ ದ್ವಿಚಕ್ರ ವಾಹನಗಳು ಮಾತ್ರ ಇಲ್ಲಿ ನಿಲ್ಲಬಹುದು. ಹಾಗಾಗಿ ಸ್ಥಳದ ಅಭಾವ ದಿಂದ ವಿನಾಯಕ ಮಾರುಕಟ್ಟೆಯಲ್ಲಿ ಸಾರ್ವಜನಿಕರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಯೋಜಿಸಲಾಗಿದೆ. ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗ ನಿಲ್ಲುವ ಭಾರಿ ವಾಹನಗಳಿಗೆ ನಗರದ ಒಳಗಡೆ ಪಾರ್ಕಿಂಗ್‌ಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಒಟ್ಟು 6 ಅಂತಸ್ತುಗಳನ್ನೊಳಗೊಂಡ ಹೈಟೆಕ್ ಬಸ್ ನಿಲ್ದಾಣ ₹ 84 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 4 ಎಕರೆ ವಿಸ್ತೀರ್ಣದಲ್ಲಿ ಬಸ್ ನಿಲ್ದಾಣ ತಲೆಎತ್ತಲಿದೆ. ಕೆಎಸ್‌ಆರ್‌ಟಿಸಿ ಹಾಗೂ ಸ್ಮಾರ್ಟ್ಸಿಟಿಗೆ ಆದಾಯ ಬರುವಂತೆ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos