ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿ ಆಗಲಿದೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿ ಆಗಲಿದೆ

ಬೆಂಗಳೂರು: ವುಮೆನ್ಸ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳಿಗೂ ಈ ಪಂದ್ಯವು ತುಂಬಾ ಮಹತ್ವದ್ದು. ಎರಡೂ ತಂಡಗಳು ಸೋತಿದ್ದು, ಇದೀಗ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇಂದು ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಹರ್ಮನ್​ಪ್ರೀತ್ ಕೌರ್ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಣಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಹೈ ವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿ ಆಗಲಿದೆ

ಸತತ ಎರಡು ಗೆಲುವಿನೊಂದಿಗೆ ಭರ್ಜರಿ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲುಣಿಸಿತ್ತು. ಹಾಗೆಯೇ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಕಳೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಗೆದ್ದು ಬೀಗಿದೆ. ಹೀಗಾಗಿ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಅದರಲ್ಲೂ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಸದ್ಯ ಆರ್​ಸಿಬಿ ತಂಡವು ದ್ವಿತೀಯ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಈ ಪಂದ್ಯದ ಬಳಿಕ ಪಾಯಿಂಟ್ಸ್​ ಟೇಬಲ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

 

 

 

ಫ್ರೆಶ್ ನ್ಯೂಸ್

Latest Posts

Featured Videos