ಇತಿಹಾಸಕಾರ `ಷ.ಶೆಟ್ಟರ್’ ನಿಧನ

ಇತಿಹಾಸಕಾರ `ಷ.ಶೆಟ್ಟರ್’ ನಿಧನ

ಬೆಂಗಳೂರು, ಪೆ. 28: ಖ್ಯಾತ ಇತಿಹಾಸಕಾರ ಷ.ಶೆಟ್ಟರ್ (85) ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಸಿರಾಟ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ಶೆಟ್ಟರ್ ಅವರನ್ನು ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೊಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಶೆಟ್ಟರ್ ಅವರು ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಕುರಿತು 27 ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳನ್ನು ಅವರು ಪ್ರಕಟಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos