‘ಹಿಟ್’ ಮ್ಯಾನ್ ಹೊಸ ದಾಖಲೆ

‘ಹಿಟ್’ ಮ್ಯಾನ್  ಹೊಸ ದಾಖಲೆ

ನವದೆಹಲಿ,ಆ.5 : ಭಾರತ ತಂಡದ ಉಪನಾಯಕ ಹಿಟ್ಮ್ಯಾನ್ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ-20 ಯಲ್ಲಿ ದಾಖಲೆಯ ವೀರನಾಗಿ ಮಿಂಚುತ್ತಿದ್ದಾರೆ. ಇಂಗ್ಲೆಂಡ್ನಲ್ಲಿ ನಡೆದ 2019 ರ ವಿಶ್ವಕಪ್ನಲ್ಲಿ 5 ಶತಕಗಳನ್ನು ಬಾರಿಸಿದ ರೋಹಿತ್ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಹೊಡೆದ ಆಟಗಾರ ಆಗಿದ್ದರು. ಈಗ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಭಾನುವಾರ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಗೆದ್ದಿದೆ. ಈ ಪಂದ್ಯದಲ್ಲಿ ರೋಹಿತ್ 51 ಎಸೆತಗಳಲ್ಲಿ 61 ರನ್ ಹೊಡೆಯುವ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ.
96 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಒಟ್ಟು 2,422 ರನ್ ಹೊಡೆಯುವ ಮೂಲಕ ಈ ಮಾದರಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರ ಆಗಿದ್ದಾರೆ. ಅದನ್ನು ಬಿಟ್ಟರೆ 2,310 ರನ್ ಹೊಡೆದಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ 2,272 ರನ್ ಹೊಡೆದಿರುವ ನ್ಯೂಜಿಲೆಂಡ್ನ ಆರಂಭಿಕ ಆಟಗಾರ ಮಾರ್ಟಿನ್ ಗುಪ್ಟಿಲ್ ಅವರು ಇದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos