ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಚ್‍.ಕೆ.ಪಾಟೀಲ್ ನೇಮಕ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಚ್‍.ಕೆ.ಪಾಟೀಲ್ ನೇಮಕ

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ಹಿರಿಯ ಶಾಸಕ ಎಚ್‌ಕೆ ಪಾಟೀಲ್ ಗೆ ಸಂಪುಟದಲ್ಲಿ ಸ್ಥಾನ ಸಿಗದೆ  ನಿರಾಶರಾಗಿದ್ದರಿಂದ, ಅಸಮಾಧಾನವನ್ನು ತಣಿಸಲು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ.

ಗದಗದ ಶಾಸಕರಾದ ಎಚ್‌.ಕೆ. ಪಾಟೀಲ್ ರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹೊಸದಾಗಿ ಸಚಿವ ಸಂಪುಟ ಸೇರುತ್ತಿರುವ ಶಾಸಕರ ಪಟ್ಟಿ ತಮಗೆ ಸಂಪುಟದಲ್ಲಿ ಸ್ಥಾನ ನೀಡದೆ ಇರುವುದರ ಬಗ್ಗೆ ಎಚ್‌.ಕೆ.ಪಾಟೀಲ್ ಅವರು ಪಕ್ಷದ ವಿರುದ್ಧ ಅತೃಪ್ತಿ ವ್ಯಕ್ತಪಡಿಸುವ ಸಾಧ್ಯತೆ ಇದ್ದಿದ್ದರಿಂದ ಅವರಿಗೆ ಈ ಹೊಣೆಗಾರಿಕೆ ನೀಡಲಾಗಿದೆ.

ಎಚ್.ಕೆ.ಪಾಟೀಲ್ ರನ್ನು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸೂಚಿಸಿದ್ದರು. ರಾಮಲಿಂಗಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ, ಸೌಮ್ಯ ರೆಡ್ಡಿ ಅಸಮಾಧಾನ ಅವರ ಆದೇಶದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಸೂಚನೆ ಹೊರಡಿಸಿದ್ದಾರೆ. ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರು ಇದುವರೆಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆ ನಿಭಾಯಿಸುತ್ತಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos