ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ

ಬೆಂಗಳೂರು: ಇಂದು ದೇಶಾದ್ಯಂತ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ರಂಗಿನ ಹಬ್ಬವನ್ನು ಮಕ್ಕಳು, ಯುವಕರು, ವೃದ್ಧರು ಎಲ್ಲರೂ ಜೊತೆ ಸೇರಿ ಆಚರಿಸಲು ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದಲೇ ಹಬ್ಬದ ಸಂಭ್ರಮ ಆರಂಭವಾಗಿದೆ.

ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ.

ಹೋಳಿ, ಬಣ್ಣಗಳ ಹಬ್ಬವು ಅನೇಕ ಕಥೆಗಳೊಂದಿಗೆ ಸಂಬಂಧ ಹೊಂದಿದೆ. ಅದರ ಹಿಂದೆ ಒಂದು ದೊಡ್ಡ ಇತಿಹಾಸವಿದೆ. ಹೋಳಿಯು ಜನಪ್ರಿಯ ಹಿಂದೂ ಹಬ್ಬಗಳಲ್ಲಿ ಒಂದಾಗಿದೆ. ಇದು ಮುಖ್ಯವಾಗಿ ಕೆಟ್ಟದ್ದರ ಮೇಲೆ ಒಳ್ಳೆಯದ ವಿಜಯವನ್ನು ಸೂಚಿಸುತ್ತದೆ. ಇದು ಪ್ರೀತಿ ಮತ್ತು ಬಣ್ಣಗಳ ಹಬ್ಬವೂ ಹೌದು.

ಈ ಹಬ್ಬವನ್ನು ವಸಂತ ಮಾಸದಲ್ಲಿ ಆಚರಿಸಲಾಗುತ್ತದೆ. ಚಳಿಗಾಲದ ಕೊನೆಯನ್ನು ವಸಂತದ ಆಗಮನವನ್ನು ಸಾರುವ ಹಬ್ಬವಾಗಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ. ಹೋಳಿ ಹಬ್ಬವನ್ನು ದಿನದಂದು ಮಕ್ಕಳಿಂದ ದೊಡ್ಡವರ ತನಕ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ದಿನ ಕಾಮನ ಸುಂದರ ಪ್ರತಿಮೆ ಮಾಡಿ ಶೃಂಗರಿಸಿ ಊರಿನ ಕಾಮನ ಕಟ್ಟೆಯ ಮೇಲೆ ಚಪ್ಪರ ಕಟ್ಟಿ ಇಡುತ್ತಾರೆ. ಕಾಮನ ಮುಂದೆ ಮಂಗಳ ವಾದ್ಯಗಳನ್ನು ಊದುತ್ತಾರೆ ಅದಲ್ಲದೆ ಪರಸ್ಪರ ಬೈಗುಳ, ಬಣ್ಣದ ನೀರು, ಸಗಣಿಯ ಗಂಜಲಗಳನ್ನು ಎರಚುತ್ತಾರೆ.

ಹೋಳಿ, ಬಣ್ಣಗಳ ಹಬ್ಬವು ಅನೇಕ ಕಥೆಗಳೊಂದಿಗೆ ಸಂಬಂಧ ಹೊಂದಿದೆ. ಅದರ ಹಿಂದೆ ಒಂದು ದೊಡ್ಡ ಇತಿಹಾಸವಿದೆ. ಹೋಳಿಯು ಜನಪ್ರಿಯ ಹಿಂದೂ ಹಬ್ಬಗಳಲ್ಲಿ ಒಂದಾಗಿದೆ. ಇದು ಮುಖ್ಯವಾಗಿ ಕೆಟ್ಟದ್ದರ ಮೇಲೆ ಒಳ್ಳೆಯದ ವಿಜಯವನ್ನು ಸೂಚಿಸುತ್ತದೆ. ಇದು ಪ್ರೀತಿ ಮತ್ತು ಬಣ್ಣಗಳ ಹಬ್ಬವೂ ಹೌದು.

ಫ್ರೆಶ್ ನ್ಯೂಸ್

Latest Posts

Featured Videos