ನನ್ನ ಮಾತಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ಕ್ಷಮೇ ಕೇಳುತ್ತೇನೆ: ಗೃಹ ಸಚಿವ

ನನ್ನ ಮಾತಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ಕ್ಷಮೇ ಕೇಳುತ್ತೇನೆ: ಗೃಹ ಸಚಿವ

ಬೆಂಗಳೂರು: ಹುಬ್ಬಳ್ಳಿ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರೀತಿಸಲು‌ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಬರೋಬ್ಬರಿ 10 ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ. ಕೊಲೆಯಾದ ಒಂದೇ ಗಂಟೆಯಲ್ಲಿ ವಿದ್ಯಾನಗರ ಠಾಣೆ‌ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆಯಾದ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಗೆ ಆಗಿರುವ ಹತ್ಯೆ ಎಂದು ಹೇಳಿದ್ದಕ್ಕೆ ಯುವತಿಯ ತಂದೆ-ತಾಯಿ ಮತ್ತು ಹುಬ್ಬಳ್ಳಿ ಮಹಿಳೆಯರ ತೀವ್ರ ಅಕ್ರೋಷಕ್ಕೆ ಒಳಗಾಗಿದ್ದ ಗೃಹ ಸಚಿವ ಜಿ ಪರಮೇಶ್ವರ್ ವಿಷಾದ ವ್ತಕ್ತಪಡಿಸಿದ್ದಾರೆ.

ಇಂದು ನಗರದಲ್ಲಿ ಮಾಧ್ಯ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗಲ್ಲ, ತನಗಿದ್ದ ಮಾಹಿತಿಯನ್ನು ಆಧರಿಸಿ ನಿನ್ನೆ ಹೇಳಿಕೆ ನೀಡಿದ್ದೇ. ತನ್ನ ಮಾತುಗಳಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು. ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos