ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್: ಆರೋಪಿ ಪತ್ತೆಗೆ ಸಿಸಿಬಿ ಪೊಲೀಸರ ಬಲೆ – ಗೃಹ ಸಚಿವ

ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್: ಆರೋಪಿ ಪತ್ತೆಗೆ ಸಿಸಿಬಿ ಪೊಲೀಸರ ಬಲೆ – ಗೃಹ ಸಚಿವ

ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಮಾತನಾಡಿ, ”ಈಗಾಗಲೇ ಓರ್ವ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಿದೆ. ಆತ ಬಸ್‌ನಲ್ಲಿ ಬಂದಿದ್ದ ಅಂತನೂ ಗೊತ್ತಾಗಿದೆ. ಈಗಿನ ಬಸ್​ಗಳಲ್ಲೂ ಸಿಸಿಟಿವಿ ಇದೆ. ಆದ್ದರಿಂದ ಶೀಘ್ರವೇ ಪೊಲೀಸರು ಆತನನ್ನು ಪತ್ತೆ ಹಚ್ಚುವರು. ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ. ಎಲ್ಲರಿಗೂ ಕಿವಿಗೆ ಗಾಯವಾಗಿದೆ.‌ ಇದರಲ್ಲಿ ಒಬ್ಬರಿಗೆ ಹೆಚ್ಚಿನ ಗಾಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ” ಎಂದು ತಿಳಿಸಿದರು.

ಆರೋಪಿಯ ಪತ್ತೆಗೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದು, ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಐಟಿಬಿಪಿಎಲ್ ವ್ಯಾಪ್ತಿಯ ಕುಂದಲಹಳ್ಳಿ ಗೇಟ್ ಬಳಿ ದಿ ರಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಬ್ರೂಕ್‌ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಆದಷ್ಟು ಶೀಘ್ರವಾಗಿ ಆರೋಪಿತರನ್ನು ಬಂಧಿಸಲಾಗುವುದು. ಬ್ರೂಕ್‌ಫೀಲ್ಡ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೂವರಿಗೆ ಕಿವಿ, ಕೈ ಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ರೀತಿಯ ಆತಂಕ‌ಪಡುವ ಅಗತ್ಯವಿಲ್ಲ.‌ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಿಸಿಬಿ ಪೊಲೀಸರ ವಿವಿಧ ತಂಡಗಳನ್ನು ರಚಿಸಲಾಗಿದ್ದು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕೃತ್ಯ ಎಸಗಿದ ವ್ಯಕ್ತಿ ಬಂದು ಹೋಗಿರುವ ಸ್ಥಳಗಳ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲಿಸುತ್ತಿದ್ದಾರೆ. ವಿರೋಧ ಪಕ್ಷದವರು ನಮ್ಮ ಜೊತೆ ಸಹಕರಿಸಬೇಕು. ಅನಗತ್ಯ ರಾಜಕೀಯ ಮಾಡುವುದಿದ್ದರೆ ಅವರು ಮಾಡಲಿ. ಆದರೆ, ಇಂತಹ ಸಂದರ್ಭದಲ್ಲಿ ಅವರು ನಮಗೆ ಸಹಕರಿಸದರೆ ಒಳ್ಳೆಯದು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos