ಬಿಎಸ್ ವೈ ವಿರುದ್ಧ ದೂರು ನೀಡಿದ ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ: ಗೃಹ ಸಚಿವ

ಬಿಎಸ್ ವೈ ವಿರುದ್ಧ ದೂರು ನೀಡಿದ ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ: ಗೃಹ ಸಚಿವ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ನಲ್ಲಿ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದೆ ಈ ವಿಚಾರವಾಗಿ ಪ್ರತಿಕ್ರಿದ ಗೃಹ ಸಚಿವ ಕಾನೂನು ಪ್ರಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಆಗಲ್ಲ ಎಂದು ಹೇಳಿದರು.

ಇದು ಮಾಜಿ ಸಿಎಂ ಒಬ್ಬರ ವಿಷಯಕ್ಕೆ ಸಂಬಂಧಿಸಿದ ಬಹಳ ಸೂಕ್ಷ್ಮವಾದ ವಿಚಾರ ಯಡಿಯೂರಪ್ಪ ಓರ್ವಹಿರಿಯ ರಾಜಕಾರಣಿ ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಮಹಿಳೆಯೊಬ್ಬರು ದೂರ ನೀಡಿದ್ದಾರೆ ಕಾನೂನು ಪ್ರಕಾರ ಪೊಲೀಸ್ ಸರು ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.

ಅಗತ್ಯವಿದ್ದರೆ ಮಹಿಳೆಗೆ ರಕ್ಷಣೆ ನೀಡಲಾಗುವುದು ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಎಂದು ಹೇಳುತ್ತಿದ್ದಾರೆ ಕೈ ಬರಹದಲ್ಲಿ ದೂರು ನೀಡಿಲ್ಲ, ಟೈಪ್ ಮಾಡಿ ಕಾಫಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳ ತಿಳಿಸಿದ್ದಾರೆ. ಯಾವುದೇ ವಿಷಯವಾದರೂ ಬಹಳ ಎಚ್ಚರಿಕೆಯಿಂದ ಹೇಳಬೇಕು ಹೆಚ್ಚಿನ ಮಾಹಿತಿ ತಿಳಿದುಕೊಳ್ಳುವವರೆಗೂ ಏನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos