ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸೇವೆ ವ್ಯತ್ಯಯ

ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸೇವೆ ವ್ಯತ್ಯಯ

ಬೆಂಗಳೂರು. ಜು, 31: ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಸೂದೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ದೇಶದೆಲ್ಲೆಡೆ  ನೀಡಿರುವ ಕರೆಗೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ರೋಗಿಗಳಲ್ಲಿ‌ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಭಿಸುವಂತಹ ಅನಿವಾ‍ಯ ಪರಿಸ್ಥಿತಿ ನಿರ್ಮಾಣ ಆಗಿತ್ತು. ಖಾಸಗಿ ಆಸ್ಪತ್ರಗಳ ವೈದ್ಯರು ಮುಷ್ಕರದಲ್ಲಿ ಭಾಗವಹಿಸಿದ್ದರಿಂದ ಖಾಸಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳು ಪರದಾಡುವಂತಾಗಿತ್ತು. (ಒಪಿಡಿ) ಹೊರರೋಗಿಗಳ ಚಿಕಿತ್ಸಾ ಘಟಕ ಮತ್ತು ಕ್ಲಿನಕಲ್ ಸೇವೆಗಳು ಬಂದ್ ಆಗಿದ್ದವು. ತುರ್ತು ಚಿಕಿತ್ಸಾ ಸೇವೆಗಳನ್ನೊರತುಪಡಿಸಿ ಉಳಿದೆಲ್ಲಾ  ಚಿಕಿತ್ಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಜು, 31 ರ ಬೆಳಿಗ್ಗೆ 6 ಗಂಟೆಗೆ ಮುಷ್ಕರ ಆರಂಭಿಸಲಾಗಿತ್ತು. ಆಗಷ್ಟ್ 1  ಸಂಜೆ 6 ಗಂಟೆವರೆಗೆ ಮುಷ್ಕರ ನಡೆಯಲಿದ್ದು, ಖಾಸಗಿ ಆಸ್ಪತ್ರೆಗಳನ್ನು ನಂಬಿಕೊಂಡಿರುವ ರೋಗಿಗಳೀಗ ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವಂತಾಗಿದೆ. ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಕ್ತ ಕ್ರಮ ಕೈಗೊಂಡು ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಕಡ್ಡಾಯ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಕಟ್ಟು ನಿಟ್ಟಿನ ಸೂಚನೆ ನೀಡಿ ಆದೇಶ ಹೊರಡಿಸಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ದೊರೆಯುವ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಇಲಾಖೆ ಕ್ರಮ ಕೈಗೊಂಡಿದೆ.

ಭಾರತೀಯ ವೈದ್ಯಕೀಯ ಸಂಘದಲ್ಲಿ 25 ಸಾವಿರ ಸದಸ್ಯರಿದ್ದು, ಅವರೆಲ್ಲರೂ ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಔಷದಿ ಅಂಗಡಿ ಮಳಿಗೆಗಳು ಎಂದಿನಂತೆ ತೆರೆದಿದ್ದು, ಎಲ್ಲಾ ರೀತಿಯ ಔಷದಿಗಳು ದೊರೆಯಲಿವೆ. ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪನೆಯ ಮಸೂದೆ ವಿರೋಧಿಸಿ ವೈದ್ಯರು ಕೈಗೊಂಡಿರುವ ಮುಷ್ಕರದಿಂದ ದೇಶಾದ್ಯಂತ ಖಾಸಗಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ. ಹೊರ ಮತ್ತು ಒಳ ರೋಗಿಗಳು, ತುರ್ತು ಚಿಕಿತ್ಸೆಗೆ  ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈ ಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲೂ ವೈದ್ಯಕೀಯ ಚಿಕಿತ್ಸೆಗಳಲ್ಲಿ ಯಾವುದೆ ರೀತಿಯ ತೊಂದರೆ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ. ಮೆಡಿಕಲ್ ಕೌನ್ಸಿಲಿಂಗ್ ಇಂಡಿಯಾ ಬದಲಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪಿಸುವ ಮಸೂದೆಗೆ ಲೋಕಸಭೆಯಲ್ಲಿ  ಕಳೆದ ವರ್ಷ ಜುಲೈ ನಲ್ಲಿ ಒಪ್ಪಿಗೆ ನೀಡಲಾಗಿತ್ತು. ಮಸೂದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿರವುದನ್ನು ವಿರೋಧಿಸಿ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos