‘ಸಂತ್ರಸ್ತರಿಗೆ ಕೂಡಲೇ ಮನೆ ನೀಡಿ’ : ಸಚಿವ ಆರ್. ವಿ. ದೇಶ ಪಾಂಡೆ

‘ಸಂತ್ರಸ್ತರಿಗೆ ಕೂಡಲೇ ಮನೆ ನೀಡಿ’ : ಸಚಿವ ಆರ್. ವಿ. ದೇಶ ಪಾಂಡೆ

ಮಡಿಕೇರಿ, ಜೂ. 20: ‘ಕಳೆದ ವರ್ಷ ಮುಂಗಾರಿನಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಸಂತ್ರಸ್ತರಿಗಾಗಿ ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿಯಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ವೀಕ್ಷಣೆ ಮಾಡಿದರು.

ಬಳಿಕ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂತ್ರಸ್ತ ಕುಟುಂಬದವರಿಗೆ ಜುಲೈ31ರೊಳಗೆ ಕರ್ಣಂಗೇರಿಯಲ್ಲಿ ನಿರ್ಮಿಸಿರುವ ಮನೆಗಳನ್ನು, ಆಗಸ್ಟ್ 15ರೊಳಗೆ ಮದೆನಾಡು ಗ್ರಾಮದ ಬಳಿ ನಿರ್ಮಿಸಲಾಗಿರುವ ಮನೆಗಳನ್ನು ಹಸ್ತಾಂತರಿಸಬೇಕು. ಉಳಿದಂತೆ ಜಂಬೂರಿನಲ್ಲಿ ನಿರ್ಮಾಣವಾಗುತ್ತಿರುವ ಮನೆಗಳನ್ನು ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಿ ಹಸ್ತಾಂತರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಮನೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಅರ್ಹರಿಗೆ ಮನೆ ನೀಡಲು ಮುಂದಾಗಬೇಕು ಎಂದು ಅವರು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos