ಕೊರೋನಾ ನಿಯಂತ್ರಣಕ್ಕೆ ಮತ್ತೆ ಲಾಕ್‌ಡೌನ್ ಇಲ್ಲ

ಕೊರೋನಾ ನಿಯಂತ್ರಣಕ್ಕೆ ಮತ್ತೆ ಲಾಕ್‌ಡೌನ್ ಇಲ್ಲ

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಹಾಗಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶಾಸಕರ ಸಭೆ ಕರೆದ ಅವರು, ಕೊರೋನಾ ನಿಯಂತ್ರಿಸುವ ಸಂಬಂಧ ಎಲ್ಲರ ಅಭಿಪ್ರಾಯ ಪಡೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಶಾಸಕರ ಸಹಕಾರ ಅಗತ್ಯವಿದ್ದು, ಅವರವರ ಕ್ಷೇತ್ರಗಳತ್ತ ಗಮನಹರಿಸುವ ಅಗತ್ಯವಿದೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos