ಇಂದು ಹುಬ್ಬಳ್ಳಿಯಲ್ಲಿ ಸಿಎಂ ಮತ ಪ್ರಚಾರ

ಇಂದು ಹುಬ್ಬಳ್ಳಿಯಲ್ಲಿ ಸಿಎಂ ಮತ ಪ್ರಚಾರ

ಹುಬ್ಬಳ್ಳಿ, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಎರಡನೇ ಹಂತದ ಚುನಾವಣೆಗೆ ಇಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಧಾರವಾಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿನಯ್ ಕುಲಕರ್ಣಿ ಪರ ಮತಯಾಚನೆ ಮಾಡಲಿದ್ದಾರೆ.

ಜೆಡಿಎಸ್ -ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಗಿಯಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರದ ಗೋಕಲ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ, ಮೈತ್ತಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಪಾಲ್ಗೊಂಡು ವಿನಯ್ ಕುಲಕರ್ಣಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos