ಅಪ್ಪಳಿಸಿದ ನಿವಾರ್ ಚಂಡಮಾರುತ

ಅಪ್ಪಳಿಸಿದ ನಿವಾರ್ ಚಂಡಮಾರುತ

ಕೋಲಾರ: ನಿವಾರ್ ಚಂಡಮಾರುತವು ಜಿಲ್ಲೆಯಾದ್ಯಂತ ಮುಂಬರುವ 3 ದಿನಗಳ ಕಾಲ ಬಿರುಗಾಳಿಯಿಂದ ಕೂಡಿದ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗುವುದಾಗಿ ಭಾರತದ ಹವಮಾನ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಘಟಕದಿಂದ ತಿಳಿಸಿದ್ದು, ಈ ಸಂಬಂಧ ಜಿಲ್ಲೆಯಾದ್ಯಾಂತ ಮಳೆಯಿಂದ ಸಾರ್ವಜನಿಕ ಆಸ್ತಿ ಹಾಗೂ ಮಾನವ, ಜಾನುವಾರುಗಳ ಜೀವ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರತಿದಿನ ಹಾನಿಯ ಬಗ್ಗೆ ವರದಿಯನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ತಹಶಿಲ್ದಾರ್‌ಗಳಿಗೆ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚಿನ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂ. ಈಗಾಗಲೇ ದಿನದ 24*7 ಕಾರ್ಯನಿರ್ವಹಿಸುತ್ತಿದೆ. ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ – 1077, 08152-243506 ವಿಪತ್ತಿನಲ್ಲಿರುವ ಸಾರ್ವಜನಿಕರು ಕರೆ ಮಾಡಿ ತಿಳಿಸಬಹುದಾಗಿದೆ. ಕಂಟ್ರೋಲ್ ರೂಂ ನ ಸಿಬ್ಬಂದಿ ಎನ್.ಗೋವಿಂದ ರಾಜು ಮೊಬೈಲ್ ಸಂಖ್ಯೆ 9740050061, ವಿ.ಮಂಜುನಾಥ್ ಮೊಬೈಲ್ ಸಂಖ್ಯೆ 9141577499 ಇವರನ್ನು ಸಂಪರ್ಕಿಸಬಹುದಾಗಿದೆ.
ನಿಯಂತ್ರಣ ಕ್ರಮಗಳು
ತಹಶೀಲ್ದಾರರು ಜಿಲ್ಲಾಧಿಕಾರಿಗಳ ಕಛೇರಿಯಿಂದ ಯಾವುದೇ ಪೂರ್ವಾನುಮತಿ ಇಲ್ಲದೆ ತಮ್ಮ ಕೇಂದ್ರಸ್ಥಾನಗಳನ್ನು ಬಿಡದೆ, ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು ಸಾರ್ವಜನಿಕರಿಂದ ಸ್ವೀಕರಿಸಲಾಗುವ ಕುಂದು ಕೊರತೆಗಳು ಹಾಗೂ ಅಗತ್ಯ ನಿಯಂತ್ರಣಾ ಕ್ರಮಗಳನ್ನು ಕೈಗೂಳ್ಳಬೇಕು.
ಇಲಾಖೆಗಳನ್ನು ಒಳಗೊಂಡಂತೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು. ಅತಿವೃಷ್ಠಿಯಿಂದ ಸಂಭವಿಸಲಾದ ಸಾರ್ವಜನಿಕರ ಆಸ್ತಿ ಹಾನಿ, ಮಾನವ ಅಥವಾ ಜಾನುವಾರು ಜೀವಹಾನಿ, ಬೆಳೆಹಾನಿ, ಮನೆಗಳ ಹಾನಿ ಬಗ್ಗೆ ಸಂಬಂಧಿಸಿದ ಗ್ರಾಮಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರಿಂದ ವರದಿ ಪಡೆದು, ತಾಲ್ಲೂಕುವಾರು ಕ್ರೂಢಿಕರಿಸಿ ನಿಗಧಿತ ನಮೂನೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಪ್ರತಿದಿನ ಬೆಳಿಗ್ಗೆ 10.00 ಗಂಟೆಗೆ ಹಾಗೂ ಸಂಜೆ 4.00 ಗಂಟೆಗೆ ತಪ್ಪದೇ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos