ಪತಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತ್ನಿ

ಪತಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತ್ನಿ

ಹೈದರಾಬಾದ್,ನ.18: ನಾಗಮಣಿ ಎಂಬ ಯುವತಿ ಪತಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತ್ನಿ. ಮದುವೆ ಆದ ಒಂದೇ ವಾರಕ್ಕೆ ವೈವಾಹಿಕ ಜೀವನದಿಂದ ಮುಕ್ತಿ ದೊರೆಯಲು ನಾಗಮಣಿ ತನ್ನ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ.
ನಾಗಮಣಿಗೆ ಲಿಂಗಯ್ಯನ ಜೊತೆ ಮದುವೆ ಆಗಲು ಇಷ್ಟವಿರಲಿಲ್ಲ. ಆದರೂ ಆಕೆಯ ಪೋಷಕರು ಬಲವಂತವಾಗಿ ಈ ಮದುವೆ ಮಾಡಿಸಿದ್ದಾರೆ. ಹಾಗಾಗಿ ನಾಗಮಣಿ ಪತಿಯ ಮನೆಗೆ ಹೋದ ಒಂದು ವಾರದಲ್ಲೇ ಹಾಲಿನಲ್ಲಿ ವಿಷ ಹಾಕಿ ಲಿಂಗಯ್ಯನನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ. ಅದೃಷ್ಟವಶಾತ್ ಲಿಂಗಯ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos