ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆಶಿ ..?

ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆಶಿ ..?

ನವದೆಹಲಿ, ಸೆ. 26 : ಅಕ್ರಮ ಹಣ ವರ್ಗಾವಣೆ ಪ್ರಕರಣ ಹಿನ್ನಲೆ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ ಜಾರಿ ನಿರ್ದೇಶನಾಲಯ(ಇಡಿ) ವಿಶೇಷ ಕೋರ್ಟಿನಲ್ಲಿ ಜಾಮೀನು ಸಿಗದ ಹಿನ್ನಲೆ ದೆಹಲಿ ಹೈ ಕೋರ್ಟ್ ಮೆಟ್ಟಿಲೇರಲಿದ್ದಾರೆ.
ಇಡಿ ಕೋರ್ಟಿನಲ್ಲಿ ತೀರ್ಪು ಬರುತ್ತಿದ್ದಂತೆಯೇ ವಕೀಲರೊಂದಿಗೆ ಚರ್ಚೆ ನಡೆಸಿದ ಡಿ.ಕೆ ಸುರೇಶ್, ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಚಿಂತಿಸಿದ್ದಾರೆ. ಇಂದು ವಕೀಲರನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಜಾಮೀನು ನಿರಾಕರಣೆಗೆ ನೀಡಿರುವ ಕಾರಣಗಳನ್ನೇ ಮುಂದಿಟ್ಟುಕೊಂಡು ವಾದ ಮಾಡಿ ಜಾಮೀನು ದಕ್ಕಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಜಾಮೀನು ನಿರಾಕರಣೆ : ಇಡಿ ಕೋರ್ಟ್ ಜಾಮೀನು ನಿರಾಕರಿಸಲು ಪ್ರಮುಖ 3 ಕಾರಣ ಕೊಟ್ಟಿದೆ. 317 ಖಾತೆಗಳ ಮೂಲಕ ಹಣ ವರ್ಗಾವಣೆ, ಡಿಕೆಶಿ ಪ್ರಭಾವಿಯಾಗಿರೋದು ಮತ್ತು ಪ್ರಕರಣ ತನಿಖಾ ಹಂತದಲ್ಲಿದೆ. ಹಾಗಾಗಿ ಜಾಮೀನು ನೀಡೋಕೆ ಸಾಧ್ಯವಿಲ್ಲ ಅನ್ನೋ ಇದೇ ಮೂರು ವಿಚಾರಗಳನ್ನು ಇಟ್ಟುಕೊಂಡು ಹೈಕೋರ್ಟಿನಲ್ಲಿ ಡಿಕೆಶಿ ಜಾಮೀನು ಅರ್ಜಿ ಸಲ್ಲಿಸಬೇಕಾಗುತ್ತದೆ.
ಜೈಲಲ್ಲಿ ಡಿಕೆಶಿ?: ಇಂದು ಅಥವಾ ನಾಳೆ ಹೈಕೋರ್ಟಿಗೆ ಬೇಲ್ ಅರ್ಜಿ ಸಲ್ಲಿಸಿದರೆ ವಿಚಾರಣೆಗೆ ಕನಿಷ್ಠ ಒಂದು ವಾರ ಆಗಬಹುದು. ಇ.ಡಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಬಹುದು. ಎರಡೂ ಕಡೆಯ ವಾದ-ಪ್ರತಿವಾದ ಕೋರ್ಟ್ ಆಲಿಸಲಿದೆ. ಕೋರ್ಟ್ ಬೇಲ್ ಕೊಡಬಹುದು ಅಥವಾ ಕೊಡದೆಯೂ ಇರಬಹುದು. ಈ ಎಲ್ಲಾ ಪ್ರಕ್ರಿಯೆ ಮುಗಿಯಲು ಕನಿಷ್ಟ ಒಂದು ತಿಂಗಳು ಬೇಕು. ಹೀಗಾಗಿ ಇನ್ನೂ ಕನಿಷ್ಠ ಒಂದು ತಿಂಗಳು ಡಿಕೆಶಿ ಜೈಲಿನಲ್ಲೇ ಉಇಯುವ ಸಾಧ್ಯತೆ ಇದೆ. ಒಂದು ವೇಳೆ ಇಲ್ಲಿ ಬೇಲ್ ಸಿಗದಿದ್ದರೆ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ.

ಫ್ರೆಶ್ ನ್ಯೂಸ್

Latest Posts

Featured Videos