ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಈಗಾಗಲೇ ಕೋರ್ಟಿನಲ್ಲಿ ವಿಚಾರನ ನಡೆಯುತ್ತಿದೆ.
ವಿಚಾರಣೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಬಿಂದಾಸ್ ಆಗಿ ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂಗೆ ಎದುರಾಯಿತು ಮತ್ತಷ್ಟು ಸಂಕಷ್ಟ
ಇನ್ನು ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು 108 ಮಾತನಾಡಿದರು ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ವಿಪಕ್ಷ ನಾಯಕರು ಹೇಳಿರುವಂತೆ ನನಗೆ ಯಾವ ಆತಂಕ, ಉದ್ವಿಗ್ನತೆ ಇಲ್ಲ. ವಿರೋಧ ಪಕ್ಷದ ನಾಯಕರು ತಮ್ಮ ವಿರುದ್ಧ ಮಾಡಿರುವ ಸುಳ್ಳು ಆರೋಪಗಳು ನಿಜವಾಗುವುದಿಲ್ಲ ಎಂದು ಚಿಂತಿತರಾಗಿದ್ದಾರೆ. ಬಿಜೆಪಿಯವರು ಸುಳ್ಳು ಹೇಳಿದ್ದಾರೆ ಅದನ್ನು ನಿಜವೆಂದು ಸಾಬೀತುಪಡಿಸಲು ಸಾಧ್ಯವಾಗದಿರುವ ಬಗ್ಗೆ ಅವರು ಚಿಂತಿತರಾಗಿದ್ದಾರೆ ಎಂದರು.
ನಾನು ಎಂದಿಗೂ ಸುಳ್ಳು ಹೇಳಿಲ್ಲ ಮತ್ತು ಯಾವುದೇ ತಪ್ಪು ಮಾಡಿಲ್ಲ, ಆದ್ದರಿಂದ ನನಗೆ ಚಿಂತೆಯಿಲ್ಲ ಎಂದು ಹೇಳಿದರು.