ನನ್ನ ಪತ್ನಿ ತೀರ್ಮಾನವನ್ನ ನಾನು ಗೌರವಿಸುತ್ತೇನೆ: ಸಿಎಂ

ನನ್ನ ಪತ್ನಿ ತೀರ್ಮಾನವನ್ನ ನಾನು ಗೌರವಿಸುತ್ತೇನೆ: ಸಿಎಂ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ಸೈಟುಗಳನ್ನು ವಾಪಾಸು ಕೊಡುವುದಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಅವರು ಪತ್ನಿ ಪತ್ರ ಬರೆದಿದ್ದಾರೆ.

ಇನ್ನು 14 ಸೈಟು ವಾಪಸ್ ಕೊಡುದಾಗಿ ಪತ್ರ ಬರೆದಿರುವ ನನ್ನ ಪತ್ನಿಯ ತೀರ್ಮಾನವನ್ನು ನಾನು ಗೌರವಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

 ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದ ಜನತೆಗೆ ಗೊತ್ತಿರುವ ಹಾಗೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡಿದ್ದು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನಿರ್ಧಾರವನ್ನು ಗೌರವಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಮತ್ತು ನಾಳೆ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು

ಈ ಕುರಿತಂತೆ ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.

ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ. ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ, ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos