ಮಥುರಾ, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಇಂದು ಬೆಳಿಗ್ಗೆ ಮಥುರಾದ ಕೈಗಾರಿಕಾ ಪ್ರದೇಶದಲ್ಲಿರುವ ಐಸ್ ಕ್ರೀಮ್ ಕಾರ್ಖಾನೆಯಲ್ಲಿ ಅಮೋನಿಯ ಅನಿಲ ಸೋರಿಕೆಯಾಗಿದ್ದು ಹಲವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಕಿಗೆ ಬಂದಿದೆ.
ಕಾರ್ಖಾನೆಯ ಅನಿಲ ಸೋರಿಕೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಖಾನೆಯಲ್ಲಿ ಸಿಲುಕಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಮೋನಿಯಾ ಅನಿಲದ ಸೋರಿಕೆಯ ಪರಿಣಾಮವಾಗಿ ಗ್ರಾಮದ ಜನರಲ್ಲಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮಸ್ಥರು ಭಯಗೊಂಡಿದ್ದಾರೆ.
ಅಮೋನಿಯ ಅನಿಲದ ಸೋರಿಕೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಇಡೀ ಪ್ರದೇಶದಲ್ಲಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ.