ಐಎಂಎ: ಇಂದು ಇ.ಡಿ. ಅಧಿಕಾರಿಗಳಿಂದ ಜಮೀರ್ ವಿಚಾರಣೆ

ಐಎಂಎ: ಇಂದು ಇ.ಡಿ. ಅಧಿಕಾರಿಗಳಿಂದ ಜಮೀರ್ ವಿಚಾರಣೆ

ಬೆಂಗಳೂರು, ಜು. 5 : ನಗರದಲ್ಲಿ ಸಾವಿರಾರು ಜನರಿಗೆ ಹಣದ ಮೊಸಮಾಡಿರುವ ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

ನಗರದ ರಿಚ್ಮಂಡ್ ಟೌನ್ನ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನು ಮನ್ಸೂರ್ ಖಾನ್ ಗೆ ಸಚಿವ ಜಮೀರ್ ಅಹ್ಮದ್ ಮಾರಾಟ ಮಾಡಿದ್ದರು. ಈ ಬಗ್ಗೆ ವಿವರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ಜಮೀರ್ ಅವರಿಗೆ ನೋಟಿಸ್ ನೀಡಿದ್ದರು. ಜೂನ್ 5 ರಂದು ಖುದ್ದು ಹಾಜರಾಗಿ ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ ಜೊತೆ ನಡೆಸಿದ ನಿವೇಶನ ಮಾರಾಟ ಸಂಬಂಧ ಮಾಹಿತಿ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು.

ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಇ.ಡಿ ಕಚೇರಿಗೆ ಸಚಿವರು ಹಾಜರಾಗಲಿದ್ದು, ಅಧಿಕಾರಿಗಳು ನಡೆಸುವ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos