ಐಎಂಎ ಹಗರಣ ಸಿಸಿಬಿಗೆ ತನಿಖೆಗೆ: ಸಿಎಂ

ಐಎಂಎ ಹಗರಣ ಸಿಸಿಬಿಗೆ ತನಿಖೆಗೆ: ಸಿಎಂ

ಬೆಂಗಳೂರು, ಜೂನ್.11, ನ್ಯೂಸ್ ಎಕ್ಸ್ ಪ್ರೆಸ್: ಶಿವಾಜಿನಗರದ ಐಎಮ್ ಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ಖಾನ್, ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಈ ಬಗ್ಗೆ ಟ್ವಿಟರ್ನಲ್ಲಿ ಹೇಳಿಕೊಂಡಿರುವ ಸಿಎಂ ಹೆಚ್ಡಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ ಎಂಬಿಪಾಟೀಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಅಂತ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos