ದೆಹಲಿಯಲ್ಲಿ ಧಗಧಗ

ದೆಹಲಿಯಲ್ಲಿ ಧಗಧಗ

ನವದೆಹಲಿ, ಜ. 9 : ಇಂದು ಮುಂಜಾನೆ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ನಡೆದಿದ್ದು, ಪೇಪರ್ ಪ್ರಿಂಟಿಂಗ್ ಪ್ರೆಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಮೃತಪಟ್ಟಿದ್ದಾನೆ. 35 ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ಆರಿಸುವ ಕಾರ್ಯದಲ್ಲಿ ನಿರತವಾಗಿವೆ.

ಗುರುವಾರ ಬೆಳಗ್ಗೆ ಈ ದುರಂತ ನಡೆದಿದ್ದು, ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ದೆಹಲಿಯ ಪಟ್ಪರ್ಗಂಜ್ ಕೈಗಾರಿಕಾ ಪ್ರದೇಶದ ಪೇಪರ್ ಪ್ರಿಂಟಿಂಗ್ ಪ್ರೆಸ್ ಆಹುತಿಯಾಗಿದೆ. ಸದ್ಯದ ಮಾಹಿತಿ ಪ್ರಕಾರ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಎಷ್ಟು ಜನ ಬೆಂಕಿಯಲ್ಲಿ ಸಿಲುಕಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ದೆಹಲಿಯ ಪೀರಾಗರ್ಹಿಯಲ್ಲಿನ ಇನ್ವರ್ಟರ್ ಬ್ಯಾಟರೀಸ್ ಉತ್ಪಾದನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಟ್ಟಡವೇ ಕುಸಿದು ಬಿದ್ದಿತ್ತು. ಈ ದುರಂತದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ್ದರು ಹಾಗೂ 14ಕ್ಕೂ ಅಧಿಕ ಜನ ಗಾಯಗೊಂಡಿದ್ದರು. ಅದಾಗಿ ಒಂದೇ ವಾರದಲ್ಲಿ ಇದೀಗ ಮತ್ತೊಂದು ದುರಂತ ಸಂಭವಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos