ಕಲಬುರಗಿಯಲ್ಲಿ ನಿಷೇದಾಜ್ಞೆ ಜಾರಿ

ಕಲಬುರಗಿಯಲ್ಲಿ ನಿಷೇದಾಜ್ಞೆ ಜಾರಿ

ಕಲಬುರ್ಗಿ, ಡಿ. 13 : ನಗರದಲ್ಲಿ 6ರಿಂದ ಸಂಜೆ 6ವರೆಗೆ ನಿಷೇಧಾಜ್ಞೆ ವಿಧಿಸಿ ಪೊಲೀಸ್ ಕಮಿಷನರ್ ಎಂ.ಎನ್. ನಾಗರಾಜ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆಗೆ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ
ಶುಕ್ರವಾರ ಮುಸ್ಲಿಮರು ನಮಾಜ್ ಮಾಡುವುದರಿಂದ ಮಸೀದಿಗಳ ಸುತ್ತಮುತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಡಿ.ಕಿಶೋರಬಾಬು ತಿಳಿಸಿದ್ದಾರೆ.
ಗುರುವಾರ ಪೌರತ್ವ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಫ್ರೆಶ್ ನ್ಯೂಸ್

Latest Posts

Featured Videos