ಕಲಬುರಗಿಯಲ್ಲಿ  ಭಾರೀ ಮಳೆ

  • In State
  • July 2, 2020
  • 145 Views
ಕಲಬುರಗಿಯಲ್ಲಿ  ಭಾರೀ ಮಳೆ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಿದೆ. ಭಾರೀ  ಮಳೆಯಿಂದ ಹಳ್ಳದ ಸೇತುವೆ ಕೊಚ್ಚಿಹೋಗಿ ಎಸ್​ಎಸ್​ಎಲ್​​ಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾದ ಘಟನೆ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವ ಸೇತುವೆಗೆ ಹಾನಿಯಾಗಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾದರು. ಜೇವರ್ಗಿ  ತಾಲೂಕಿನಲ್ಲಿ  ಸುರಿದ ಭಾರೀ ಮಳೆಗೆ ಹಳ್ಳಕೊಳ್ಳ ಉಕ್ಕಿ ಹರಿಯುತ್ತಿವೆ. ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎದುರಿನ ಸೇತುವೆ ನೀರಿನ ರಭಸಕ್ಕೆ ಕೊಚ್ಚಿಹೋಗಿದೆ. ಪರೀಕ್ಷಾ ಪರೀಕ್ಷಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಹಾಳಾಗಿದೆ.  ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಹಳ್ಳ ದಾಟದೆ ಕಂಗಾಲಾಗಿದ್ದಾರೆ. ಪರೀಕ್ಷಾ ಕೇಂದ್ರ ಬದಲು ಮಾಡೋದು ಕಷ್ಟ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಗೊಂದಲಕ್ಕೀಡಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos