ರಾಜ್ಯದಲ್ಲಿ ಮುಂಗಾರು ಜೋರು

ರಾಜ್ಯದಲ್ಲಿ ಮುಂಗಾರು ಜೋರು

ಬೆಂಗಳೂರು, ಜು. 4: ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆ ಹಿನ್ನೆಲೆ ಬಿತ್ತನೆಯ ಸಿದ್ಧತೆಯಲ್ಲಿ ರೈತರು ನಿರತರಾಗಿದ್ದಾರೆ. ವಿವಿಧಡೆ ಬಿತ್ತನೆ ಭೂಮಿ ಹದಗೊಳಿಸಲು ಅಗತ್ಯವಿರುವ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಒಳನಾಡಿನಲ್ಲಿ ಇದೇ ರೀತಿ ಮಳೆಯಾಗುವ ಮುನ್ಸೂಚನೆಗಳಿವೆ. ಸಂಜೆ,ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯಲ್ಲಿ ಅಧಿಕ ಮಳೆಯಾಗುತ್ತಿದ್ದು, ಮಲೆನಾಡು ಭಾಗದಲ್ಲೂ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿವೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಒಳ್ಳೆಯ ಮಳೆಯಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos