ಪುಟ್ಟರಾಜು, ಬಿ.ಎಂ.ಫಾರೂಕ್ ಮನೆ ಮೇಲೆ ಐಟಿ ದಾಳಿ

ಪುಟ್ಟರಾಜು, ಬಿ.ಎಂ.ಫಾರೂಕ್ ಮನೆ ಮೇಲೆ ಐಟಿ ದಾಳಿ

ಬೆಂಗಳೂರು, ಮಾ.28, ನ್ಯೂಸ್ ಎಕ್ಸ್ ಪ್ರೆಸ್: ಇಂದು ಐಟಿ ಅಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು, ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಮನೆ ಸೇರಿದಂತೆ ರಾಜ್ಯದ ಹತ್ತಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಐಟಿ ಅಧಿಕಾರಿಗಳು ಜೆಡಿಎಸ್ ನಾಯಕರ ಮನೆಗಳಿಗೆ ದಾಳಿ ನಡೆಸಿ ದಾಖಲೆಗಳಿಗಾಗಿ ತಪಾಸಣೆ ನಡೆಸುತ್ತಿದ್ದಾರೆ. ಸಚಿವ ಸಿ ಎಸ್ ಪುಟ್ಟರಾಜು ಅವರ ಮನೆ ಮೇಲೆ ದಾಳಿ ಮಾಡುವ ಸಂದರ್ಭ ಸಿಆರ್ ಪಿಎಫ್ ಭಧ್ರತೆಯೊಂದಿಗೆ ದಾಳಿ ಮಾಡಲಾಗಿದೆ.

ಹಾಸನದಲ್ಲಿ 10 ಹೆಚ್ಚು ಜೆಡಿಎಸ್ ಮುಖಂಡರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos