ರಿಜ್ವಾನ್ ಅರ್ಷದ್ ಆಪ್ತರ ಮನೆ ಮೇಲೆ ಐಟಿ ದಾಳಿ

ರಿಜ್ವಾನ್ ಅರ್ಷದ್ ಆಪ್ತರ ಮನೆ ಮೇಲೆ ಐಟಿ ದಾಳಿ

ಬೆಂಗಳೂರು, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣಾ ಹೊಸ್ತಿನಲ್ಲಿನಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಆಪ್ತರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಯುತ್ತಿವೆ ಎಂಬ ಆರೋಪಗಳ ನಡುವೆಯೇ ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಮುಂಜಾನೆ 6 ಗಂಟೆಯಿಂದಲೂ ಸುಮಾರು 100ಕ್ಕೂ ಹೆಚ್ಚು ಐಟಿ ಅಧಿಕಾರಿಗಳು 20 ಕಡೆಗಳಲ್ಲಿ ದಾಳಿ ನಡೆಸಿದ್ದು, ರಿಯಲ್ ಎಸ್ಟೇಟ್ ಉದ್ಯಮಿ ನಯಿಜ್ ಖಾನ್, ಅರಮನೆ ಮೈದಾನದಲ್ಲಿ ಹೂವಿನ ಅಲಂಕಾರ ಮಾಡುವ ಅಮಾನುಲ್ಲಾ ಖಾನ್ ಮತ್ತು ಕಮಲ್ ಪಾಷ ಅವರುಗಳ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರನ್ನು ಸೋಲಿಸಲೇಬೇಕೆಂದು 2ನೇ ಬಾರಿ ಲೋಕಸಬೆ ಚುನಾವಣಾ ಅಖಾಡಕ್ಕೆ ಧುಮುಕಿರುವ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಹಲವಾರು ರೀತಿಯ ರಣತಂತ್ರ ರೂಪಿಸಿದ್ದರು.

ಬಿರುಸಿನ ಪ್ರಚಾರದಲ್ಲೂ ತೊಡಿಗದ್ದರು. ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ರಿಜ್ವಾನ್ ಅವರಿಗೆ ಶಾಕ್ ನೀಡಿದೆ. ಲೋಕಸಭೆ ಚುನಾವಣೆ ಪ್ರಕ್ರಿಯೆ ಆರಂಭವಾದ ನಂತರ ಸಚಿವ ಪುಟ್ಟರಾಜು ಅವರ ಆಪ್ತರ ಮನೆಗಳ ಮೇಲೆ ಐಟಿ ದಾಳಿ ನಡೆದಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಎಲ್ಲ ನಾಯಕರು ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos