ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ

ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ

ಮೈಸೂರು, ಏ. 15, ನ್ಯೂಸ್ ಎಕ್ಸ್ ಪ್ರೆಸ್: ಕನ್ನಡ ಚಿತ್ರರಂಗದ ನಟ ದರ್ಶನ್ ರವರು, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.  ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ತಾಲ್ಲೂಕಿನಲ್ಲಿರುವ ನಟ ದರ್ಶನ್ ಫಾರ್ಮ ಹೌಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ, ದಾಖಲೆಯ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

ದರ್ಶನ್ ಸುಮಲತಾ ಪರವಾಗಿ ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ ನಂತರ ಯಶ್ ಮತ್ತು ನಟ ದರ್ಶನ್ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಇಂತಹ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ವಂಚನೆ ಸೇರಿದಂತೆ ವಿವಿಧ ಬಗೆಯ ಆಕ್ರಮದ ಬಗ್ಗೆ ದಾಖಲೆಗಳ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos