ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೇಳೆ ಕಾಳುಗಳ ದರದಲ್ಲಿ ಏರಿಕೆ!

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೇಳೆ ಕಾಳುಗಳ ದರದಲ್ಲಿ ಏರಿಕೆ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದುಬಾರಿ ದುನಿಯಾ ಆಗಿರುವುದರಿಂದ ಜನಸಾಮಾನ್ಯರು ಜೀವನ ನಡೆಸುವುದು ಒಂದು ದೊಡ್ಡ ಸಮಸ್ಯೆಯಾಗಿದೆ ಅದರಲ್ಲಿಯೂ ಸಹ ಹಣ್ಣು ತರಕಾರಿ ಪೆಟ್ರೋಲ್ ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಇದೇ ತರ ದುಬಾರಿ ದುನಿಯಾದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ.
ಗಣೇಶ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ. ಆದರೆ ಬೆಂಗಳೂರಿಗರಿಗೆ ಈ ಗಣೇಶ ಹಬ್ಬ ಭಾರೀ ದುಬಾರಿ ಆಗಲಿದೆ. ಏಕೆಂದರೆ ಗಣೇಶ ಮೂರ್ತಿಗಳು ಮತ್ತು ಹಬ್ಬದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರ ನಡುವೆ ಮುಂಗಾರು ಮಳೆ ಕೈಕೊಟ್ಟ ಕಾರಣ ಬೇಳೆಕಾಳುಗಳ ಬೆಲೆಯಲ್ಲೂ ತೀವ್ರ ಏರಿಕೆ ಕಂಡು ಬಂದಿದೆ. ರಾಜ್ಯದಲ್ಲಿ ಎದುರಾಗಿರುವ ಮಳೆಯ ಕೊರತೆಯು ಬೇಳೆಕಾಳುಗಳ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಬೇಳೆಕಾಳುಗಳ ಬೆಲೆಯಲ್ಲಿ 20-30% ಏರಿಕೆಯಾಗಿದೆ. “ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ಇರುವುದೇ ಬೆಲೆ ಗಗನಕ್ಕೇರಲು ಪ್ರಮುಖ ಕಾರಣ. ಪ್ರಮುಖ ಬೇಳೆಕಾಳುಗಳಲ್ಲಿ ಒಂದಾದ ತೊಗರಿ ಬೇಳೆ ಬೆಳೆ ಮೊದಲ ಕೊಯ್ಲಿನಲ್ಲಿ ವಿಫಲವಾಗಿದೆ. ಹಾಗೆಯೇ ಕಡಲೆ ಬೆಳೆ ಮತ್ತು ಹುರಿಕಡಲೆ, ಎರಡೂ ಶೇಕಡಾ 30 ರಷ್ಟು ಬೆಳೆ ನಷ್ಟವಾಗಿದೆ. ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ ಮತ್ತು ರಾಯಚೂರು ದ್ವಿದಳ ಧಾನ್ಯಗಳ ಉತ್ಪಾದನೆಗೆ ಪ್ರಮುಖ ಜಿಲ್ಲೆಗಳಾಗಿದ್ದು, ಈ ಎಲ್ಲ ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ. “ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮಳೆಯಾದರೆ, ಡಿಸೆಂಬರ್ ವೇಳೆಗೆ ಬೆಲೆಯಲ್ಲಿ ಸ್ವಲ್ಪ ಸ್ಥಿರತೆಯನ್ನು ನಾವು ನಿರೀಕ್ಷಿಸಬಹುದು.

ಫ್ರೆಶ್ ನ್ಯೂಸ್

Latest Posts

Featured Videos