ದರ ಹೆಚ್ಚಳ

ದರ ಹೆಚ್ಚಳ

ಬೆಂಗಳೂರು, ಡಿ. 28: ಸಹಕಾರ ಹಾಲು ಒಕ್ಕೂಟದ ವತಿಯಿಂದ ರೈತರಿಂದ ಪಡೆಯುವ ಹಾಲಿನ ಖರೀದಿ ದರ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ.

ಒಂದು ಲೀಟರ್ ಗೆ 3 ರೂಪಾಯಿವರೆಗೆ ದರ ಹೆಚ್ಚಿಸುವ ಸಾಧ್ಯತೆ ಇದ್ದು, ಡಿಸೆಂಬರ್ 3೦ ರಂದು ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಬೆಂಗಳೂರು ಸಹಕಾರ ಹಾಲು ಒಕ್ಕೂಟ ವ್ಯಾಪ್ತಿಯ 14 ತಾಲೂಕುಗಳ ರೈತರಿಗೆ ಇದರಿಂದ ಅನುಕೂಲವಾಗಲಿದೆ. ಪ್ರಸ್ತುತ ಬಮುಲ್ ವತಿಯಿಂದ ಹಾಲು ಉತ್ಪಾದಕರಿಗೆ ಲೀಟರ್ ಹಾಲಿಗೆ 26 ರೂಪಾಯಿ ನೀಡುತ್ತಿದ್ದು ಸರ್ಕಾರದ ಪ್ರೋತ್ಸಾಹ ಧನವಾಗಿ ೬ ರೂ. ಕೊಡಲಾಗುತ್ತಿದೆ. ಒಂದು ಲೀಟರ್ ಹಾಲಿಗೆ ರೈತರಿಗೆ 31 ರೂ. ಸಿಗುತ್ತಿದ್ದು, ಶೀಘ್ರದಲ್ಲೇ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

 

 

 

 

ಫ್ರೆಶ್ ನ್ಯೂಸ್

Latest Posts

Featured Videos