ತ್ಯಾಗ ಬಲಿದಾನದ ಪ್ರತೀಕವೇ ಸ್ವಾತಂತ್ರ‍್ಯ ದಿನಾಚರಣೆ

ತ್ಯಾಗ ಬಲಿದಾನದ ಪ್ರತೀಕವೇ ಸ್ವಾತಂತ್ರ‍್ಯ ದಿನಾಚರಣೆ

ಹೊಸಕೋಟೆ:ಸ್ವಾತಂತ್ರ‍್ಯ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ತಾಲೂಕಿನ ಸಮಸ್ತ ಜನತೆಗೆ ವೈಯಕ್ತಿಕ ಹಾಗೂ ಸರ್ಕಾರದ ಪರವಾಗಿ ಶುಭಾಶಯಗಳು. ಅನೇಕ ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲದಿಂದ ದೊರೆತಿರುವ ಈ ನಮ್ಮ ಸ್ವಾತಂತ್ರ‍್ಯವನ್ನು ಶಾಶ್ವತವಾಗಿ ರಕ್ಷಿಸಿಕೊಂಡು ಬರುವ ಸಂಕಲ್ಪ ಮಾಡಿ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಿದ ಎಲ್ಲ ಮಹನೀಯರನ್ನು ಈ ದಿನದಂದು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು
ಬ್ರಿಟೀಷರ ಆಡಳಿತವನ್ನು ಅಹಿಂಸಾ ಮಾರ್ಗದಿಂದಲೆ ಸ್ವಾತಂತ್ರ‍್ಯಕ್ಕಾಗಿ ಅರ್ಪಣಾ ಮನೋಭಾವದಿಂದ ಹೋರಾಟ ಮಾಡಿದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ, ಪಂಡಿತ್ ಜವಹರಲಾಲ್ ನೆಹರು, ಬಾಲ ಗಂಗಾಧರ್ ತಿಲಕ್, ಲಾಲಾ ಲಜಪತ್ ರಾಯ್, ಸರ್ಧಾರ್ ವಲ್ಲಭ ಬಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ್ ಆಜಾದ್, ಸರೋಜಿನಿ ನಾಯ್ಡು, ಭಗತ್ ಸಿಂಗ್ ಹಾಗೂ ಮೌಲಾನಾ ಅಬ್ದುಲ್ ಕಲಾಮ್ ಆಜಾದ್ ಇನ್ನಿತರ ಅಸಂಖ್ಯಾತ ಮಹಾನ್ ಚೇತನಗಳಿಗೆ ಗೌರವ ನಮನ ಸಲ್ಲಿಸುವುದು ನಮ್ಮೆಲ ಆದ್ಯ ಕರ್ತವ್ಯ ಎಂದು ಈ ಸಂದರ್ಭದಲ್ಲಿ ತಿಳಿಸಿದರು
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಹಾಗೂ
ಕೊರೋನಾ ವಾರಿಯರ್ಸ್ ಹಾಗೂ ಹೊಸಕೋಟೆ ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಉತ್ತಮ ಸಾಧಕರೆಂದು ಎಂದು ಅಧಿಕಾರಿಗಳಿಗೆ ಸನ್ಮಾನಿಸಲಾಯಿತು. ತಾಲೂಕು ದಂಡಾಧಿಕಾರಿ ಗೀತಾ ಮಾತನಾಡಿ ದೇಶದ ನಾಗರೀಕರಾಗಿ ಭವ್ಯ ಪರಂಪರೆ, ಸಂಸ್ಕೃತಿ ಇವುಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗುವತ್ತ ನಾವೆಲ್ಲರೂ ಯೋಚಿಸಬೇಕಾಗಿದೆ. ಜಾತಿ, ಭಾಷೆ, ಪಂಗಡಗಳ ಸಂಕುಚಿತ ಭಾವನೆಯಿಂದ ಹೊರಬಂದು ಸ್ನೇಹ ಹಾಗೂ ಸೌಹಾರ್ದತೆಯ ವಾತಾವರಣ ನಿರ್ಮಿಸಿ ದೇಶದ ಒಗ್ಗಟ್ಟು ಮತ್ತು ಐಕ್ಯತೆಯನ್ನು ಕಾಪಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವ ದಿಕ್ಕಿನಲ್ಲಿ ನಾವು ಒಟ್ಟಾಗಿ ಸೇರಿ ಶ್ರಮಿಸಬೇಕಾಗಿದೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥ್ ಗೌಡ ಬಿಇಒ ಕನ್ನಯ್ಯ . ನಗರಸಭೆ ಆಯುಕ್ತಪರಮೇಶ್. ಎಪಿಎಂಸಿ ಅಧ್ಯಕ್ಷ ಧರ್ಮೇಶ್ ನಗರಸಭೆ ಎಲ್ಲಾ ಸದಸ್ಯರು ಹಾಗೂ ಶಿಕ್ಷಕರು ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹಾಗೂ ತಾಲೂಕಿನ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos