ಇಂದು ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಇಂದು ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ನವದೆಹಲಿ, ಆ. 15: ಇಂದು ನಮ್ಮ ದೇಶದ ಪ್ರತಿ ಮೂಲೆ ಮೂಲೆಯಲ್ಲಿ ಹಬ್ಬದ ವಾತಾವರಣ. ಹೌದು, ಇಂದು  ದೇಶಾದ್ಯಂತ 73ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಷ್ಟ್ರರಾಜಧಾನಿ ನವದೆಹಲಿ ಸೇರಿದಂತೆ ದೇಶದ ಮೂಲೆಮೂಲೆಗಳಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಜೋರಾಗಿದೆ.

ಈ ಬಾರಿ ಪ್ರಮುಖವಾಗಿ ಲಡಾಖ್ ನಲ್ಲಿ ಧ್ವಜಾರೋಹಣ ನೆರವೇರಿಸುತ್ತಿರುವುದು ವಿಶೇಷವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ದೆಹಲಿಯ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಂಸತ್ ಭವನ, ಇಂಡಿಯಾ ಗೇಟ್ ಗೆ ವಿಶೇಷ ಭದ್ರತೆ ಒದಗಿಸಲಾಗಿದೆ. ಕೆಂಪುಕೋಟೆಗೆ ಬಿಗಿ ಭದ್ರತೆ ಒದಗಿಸಿದ್ದು, ಮೋದಿ ಭಾಷಣ ಮಾಡುವ ಸುತ್ತಮುತ್ತ 4 ಹಂತದ ಭದ್ರತೆ ಒದಗಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos