ಬೆಂಗಳೂರು: ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಆಫ್ರಿಕನ್ ಬೌಲಿಂಗ್ ದಾಳಿಗೆ ನಲುಗಿದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್ನಲ್ಲಿ ಕೇವಲ 131 ರನ್ಗಳಿಗೆ ಆಲೌಟ್ ಆಗುವ ಮೂಲಕ ಹರಿಣಗಳ ನಾಡಲ್ಲಿ ಸರಣಿ ಗೆದ್ದು ಇತಿಹಾಸ ಸೃಷ್ಟಿಸುವ ಅವಕಾಶವನ್ನು ಕೈಚೆಲ್ಲಿದೆ. ದಕ್ಷಿಣ ಆಫ್ರಿಕಾ ಇನ್ನಿಂಗ್ಸ್ ಮತ್ತು 32 ರನ್ಗಳಿಂದ ಗೆದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಸರಣಿ ಸಮಬಲಕ್ಕೆ ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಲೇ ಬೇಕು.