ಆಸ್ಟ್ರೇಲಿಯಾ ವಿರುದ್ದ ಸೇಡು ತೀರಿಸಿಕೊಳ್ಳುತ್ತಾ ಭಾರತ!

ಆಸ್ಟ್ರೇಲಿಯಾ ವಿರುದ್ದ ಸೇಡು ತೀರಿಸಿಕೊಳ್ಳುತ್ತಾ ಭಾರತ!

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರನೇ ಟಿ20 ಪಂದ್ಯವು ಇಂದು ನಡೆಯಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಮ್ಯಾಚ್ ಸರಣಿ ನಿರ್ಣಾಯಕ ಪಂದ್ಯ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

ಇನ್ನು ದ್ವಿತೀಯ ಟಿ20 ಪಂದ್ಯವನ್ನು ಆಸ್ಟ್ರೇಲಿಯಾ ತಂಡ 6 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದೀಗ ಕೊನೆಯ ಟಿ20 ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇದೀಗ ಏಕದಿನ ಸರಣಿ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಆಸೀಸ್ ಪಡೆಯನ್ನು ಬಗ್ಗು ಬಡಿದು ಭಾರತ ತಂಡ ಸರಣಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಫ್ರೆಶ್ ನ್ಯೂಸ್

Latest Posts

Featured Videos