ಭಾರತ 445 ರನ್​ಗಳಿಗೆ ಆಲೌಟ್

ಭಾರತ 445 ರನ್​ಗಳಿಗೆ ಆಲೌಟ್

ಬೆಂಗಳೂರು: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ರಾಜ್‌ಕೋಟ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಭಾರತ ತಂಡ ಬ್ಯಾಟಿಂಗ್‌ ಆರಂಭಿಸಿದಾಗ ಮೊದಲ ದಿನ ಉತ್ತಮ ಆರಂಭ ದೊರಕಲಿಲ್ಲ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ನ ಎರಡನೇ ದಿನ ಭಾರತ ಆಲೌಟ್ ಆಗಿದೆ. ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್‌ ಕಳೆದುಕೊಂಡು 326 ರನ್ ಗಳಿಸಿದ್ದ ಟೀಮ್ ಇಂಡಿಯಾ ಇದೀಗ 445 ರನ್​ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡಿದೆ. ನಿನ್ನೆ 110 ರನ್ ಗಳಿಸಿದ್ದ ರವೀಂದ್ರ ಜಡೇಜಾ ಇಂದು ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಪದಾರ್ಪಣೆ ಪಂದ್ಯದಲ್ಲಿ ಧ್ರುವ್ ಜುರೆಲ್ 46 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು.

ಮೊದಲ ದಿನ ಭಾರತದ ಪರವಾಗಿ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಶತಕ ಗಳಿಸಿದರು. ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿರುವ ಸರ್ಫರಾಜ್ ಖಾನ್ ಕೂಡ ಅರ್ಧಶತಕ ಗಳಿಸಿದರು.

ಕುಲ್ದೀಪ್ ಯಾದವ್ 4 ರನ್​ಗೆ ನಿರ್ಗಮಿಸಿದರು. ಬಳಿಕ ಆರ್. ಅಶ್ವಿನ್ ಹಾಗೂ ಧ್ರುವ್ ಜುರೆಲ್ ಅರ್ಧಶತಕದ ಜೊತೆಯಾಟ ಆಡಿ ಆಸರೆಯಾದರು. ಆದರೆ, ಚೆನ್ನಾಗಿಯೆ ಆಡುತ್ತಿದ್ದ ಅಶ್ವಿನ್ 37 ರನ್​ಗೆ ನಿರ್ಗಮಿಸಿದರೆ, ಧ್ರುವ್ (46) ಅರ್ಧಶತಕದ ಅಂಚಿನಲ್ಲಿ ಎಡವಿದರು.

ಕೊನೆಯಲ್ಲಿ ಜಸ್ಪ್ರೀತ್ ಬುಮ್ರಾ 26 ರನ್​ಗಳಿಗೆ ಔಟ್ ಆಗುವ ಮೂಲಕ ಟೀಮ್ ಇಂಡಿಯಾ ಆಲೌಟ್ ಆಯಿತು. ಮೊಹಮ್ಮದ್ ಸಿರಾಜ್ 3 ರನ್ ಗಳಿಸಿ ಅಜೇಯರಾಗಿ ಉಳಿದರು.  ಭಾರತ 130.5 ಓವರ್​ಗಳಲ್ಲಿ 445 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು.

ಫ್ರೆಶ್ ನ್ಯೂಸ್

Latest Posts

Featured Videos