ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ

ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳಲ್ಲಿ ಈಗಾಗಲೇ ಮೂರು ಟೆಸ್ಟ್ ಪಂದ್ಯಗಳ ನಡೆದಿದ್ದು ಈ ಟೆಸ್ಟ್‌ ಪಂದ್ಯಗಳಲ್ಲಿ ಭಾರತ 2-1 ಅಂಕದಿಂದ ಮುನ್ನಡೆ ಸಾಧಿಸಿತ್ತು.

ರಾಂಚಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ  ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 3-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಿತು.

ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ಪರ ಜೋ ರೂಟ್ (122) ಅಜೇಯ ಶತಕ ಬಾರಿಸಿದ್ದರು. ಈ ಸೆಂಚುರಿ ನೆರವಿನಿಂದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 353 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡದ ಪರ ಯುವ ವಿಕೆಟ್ ಕೀಪರ್ ಧ್ರುವ್ ಜುರೇಲ್ (90) ಹಾಗೂ ಯಶಸ್ವಿ ಜೈಸ್ವಾಲ್ (73) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ಹೊರತಾಗಿಯೂ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 307 ರನ್​ಗಳಿಗೆ ಆಲೌಟ್ ಆಗಿ 46 ರನ್​ಗಳ ಹಿನ್ನಡೆ ಅನುಭವಿಸಿದೆ. ಈ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ಪರ ಶೊಯೆಬ್ ಬಶೀರ್ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

46 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್​ ಅವರ ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ ಇಂಗ್ಲೆಂಡ್ ಕೇವಲ 145 ರನ್​ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಅಶ್ವಿನ್ 5 ವಿಕೆಟ್ ಕಬಳಿಸಿದರೆ, ಕುಲ್ದೀಪ್ 4 ವಿಕೆಟ್ ಪಡೆದರು.

ಮೊದಲ ಇನಿಂಗ್ಸ್​​ನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 192 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 84 ರನ್ ಪೇರಿಸಿದರು. ಯಶಸ್ವಿ ಜೈಸ್ವಾಲ್ (37) ಹಾಗೂ ರೋಹಿತ್ ಶರ್ಮಾ (55) ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು.

120 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಶುಭ್​ಮನ್ ಗಿಲ್  ಹಾಗೂ ಧ್ರುವ್ ಜುರೇಲ್ ಆಸರೆಯಾದರು. 6ನೇ ವಿಕೆಟ್​ಗೆ 72 ರನ್​ಗಳ ಜೊತೆಯಾಟವಾಡುವ ಮೂಲಕ ಗಿಲ್ (52) – ಧ್ರುವ್ (39) ಜೋಡಿ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಭಾರತ ತಂಡವು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos