ಶ್ರೀಲಂಕಾ ವಿರುದ್ಧ ಭಾರತಕ್ಕೆ ಅಮೋಘ ಜಯ

ಶ್ರೀಲಂಕಾ ವಿರುದ್ಧ ಭಾರತಕ್ಕೆ ಅಮೋಘ ಜಯ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ 33ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಕುಸಲ್ ಮೆಂಡಿಸ್ ನೇತೃತ್ವದ ಶ್ರೀಲಂಕಾ ಮುಖಾಮುಖಿ ಆಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ಹಂಗಾಮಿ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಶ್ರೀಲಂಕಾ ತಂಡವನ್ನು 19.4 ಓವರ್​ಗಳಲ್ಲಿ ಕೇವಲ 55 ರನ್​ಗಳಿಗೆ ಟೀಮ್ ಇಂಡಿಯಾ ಆಲೌಟ್ ಮಾಡಿದೆ. ಈ ಮೂಲಕ 302 ರನ್​ಗಳ ಬೃಹತ್ ಅಂತರದ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ 2023ರ ಸೆಮಿಫೈನಲ್​ಗೆ ಪ್ರವೇಶಿಸಿದೆ. ಇನ್ನು ಈ ಪಂದ್ಯದಲ್ಲಿ 5 ಓವರ್​ಗಳಲ್ಲಿ 18 ರನ್ ನೀಡಿ 5 ವಿಕೆಟ್ ಕಬಳಿಸಿದ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

 

ಫ್ರೆಶ್ ನ್ಯೂಸ್

Latest Posts

Featured Videos