ಗೆಲುವಿನೊಂದಿಗೆ ವಿಶ್ವಕಪ್ ಟೂರ್ನಿ ಆರಂಭಿಸಿದ ಭಾರತ

ಗೆಲುವಿನೊಂದಿಗೆ ವಿಶ್ವಕಪ್ ಟೂರ್ನಿ ಆರಂಭಿಸಿದ ಭಾರತ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಬರೀ ಆಟವಾಗಿ ಉಳಿದಿಲ್ಲಾ ಇದು ನಮ್ಮ ಎಮೋಷನ್ ಆಗಿದೆ. ಹಾಗೂ ಭಾರತ ತಂಡ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಅತ್ಯಂತ ನೆಚ್ಚಿನ ತಂಡವಾಗಿದೆ. ನಿನ್ನೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿತ್ತು.
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಬೌಲಿಂಗ್‌ನಲ್ಲಿ ಮೋಡಿ ಮಾಡಿದ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು 199 ರನ್‌ಗೆ ಆಲೌಟ್ ಮಾಡಿತು. 200 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ಸುಲಭ ಗೆಲುವಿನ ಲೆಕ್ಕಾಚಾರದಲ್ಲಿತ್ತು. ಆದರೆ ಮಿಚೆಲ್ ಸ್ಟಾರ್ಕ್ ಹಾಗೂ ಜೋಶ್ ಹೇಜಲ್‌ವುಡ್ ಆರಂಭಿಕ ಓವರ್‌ಗೆ ಟೀಂ ಇಂಡಿಯಾ ನಲುಗಿತು. ಇಶಾನ್ ಕಿಶನ್, ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಡಕೌಟ್‌ ಆದರು.
2 ರನ್‌ಗಳಿಸುವಷ್ಟರಲ್ಲೇ ಟೀಂ ಇಂಡಿಯಾ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. ಅಭಿಮಾನಿಗಳಲ್ಲಿ ಆತಂಕ ಎದುರಾಗಿತ್ತು. ಆದರೆ ಎಲ್ಲರ ಆತಂಕವನ್ನು ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ದೂರ ಮಾಡಿದರು. ಇದರ ನಡುವೆ ವಿರಾಟ್ ಕೊಹ್ಲಿ ಕ್ಯಾಚ್ ನೀಡಿ ಆತಂಕ ಸೃಷ್ಟಿಸಿದ್ದರು. ಆದರೆ ಕ್ಯಾಚ್ ಕೈಚೆಲ್ಲಿ ಜೀವದಾನ ಪಡೆದ ವಿರಾಟ್ ಕೊಹ್ಲಿ ಮತ್ತಷ್ಟು ಎಚ್ಚರಿಕೆಯಿಂದ ಬ್ಯಾಟ್ ಬೀಸಿದರು.
ಕೊಹ್ಲಿ ಹಾಗೂ ರಾಹುಲ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಕೊಹ್ಲಿ ರಾಹುಲ್ ಜೊತೆಯಾಟದಿಂದ ಆಸ್ಟ್ರೇಲಿಯಾ ಆತಂಕ ಹೆಚ್ಚಾಯಿತು. ಆದರೆ ಕೊಹ್ಲಿ 85 ರನ್ ಸಿಡಿಸಿ ಔಟಾದರು. ಕೊಹ್ಲಿ ವಿಕೆಟ್ ಪತನದ ಬಳಿಕ ಟೀಂ ಇಂಡಿಯಾ ಆಕ್ರಮಣಕಾರಿ ಆಟವಾಡಿತು. ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ಮೂಲಕ ಟಾರ್ಗೆಟ್ ಚೇಸ್ ಮಾಡಿದರು. ಕೆಎಲ್ ರಾಹುಲ್ ಭರ್ಜರಿ ಸಿಕ್ಸರ್ ಸಿಡಿಸಿ ಭಾರತಕ್ಕೆ 6 ವಿಕೆಟ್ ಗೆಲುವು ತಂದುಕೊಟ್ಟರು.
ಕೆಎಲ್ ರಾಹುಲ್ ಅಜೇಯ 97 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ ಅಜೇಯ 11 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 41.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗೆಲುವಿನ ದಡ ಸೇರಿತು.

ಫ್ರೆಶ್ ನ್ಯೂಸ್

Latest Posts

Featured Videos