ಟೆಸ್ಟ್​ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಭಾರತ-ಇಂಗ್ಲೆಂಡ್

ಟೆಸ್ಟ್​ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಭಾರತ-ಇಂಗ್ಲೆಂಡ್

ಬೆಂಗಳೂರು: 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತ ಹಾಗೂ ಇಂಗ್ಲೆಂಡ್ ಸರಣಿಯಲ್ಲಿ ವಿಶಿಷ್ಟ ದಾಖಲೆಯೊಂಧು ಸೃಷ್ಟಿಯಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸ್​ಗಳ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಸಿಕ್ಸರ್​ಗಳು ಮೂಡಿಬಂದ ಸರಣಿ ಎಂಬ ವಿಶೇಷ ದಾಖಲೆಯೊಂದು ಭಾರತ-ಇಂಗ್ಲೆಂಡ್ ನಡುವಣ ಸರಣಿಯಲ್ಲಿ ನಿರ್ಮಾಣವಾಗಿದೆ.

ಈ ಸರಣಿಯ ಐದು ಪಂದ್ಯಗಳಲ್ಲಿ ಸಿಡಿದಿರುವ ಒಟ್ಟು ಸಿಕ್ಸರ್​ಗಳ ಸಂಖ್ಯೆ 102. ವಿಶೇಷ ಎಂದರೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಣಿಯೊಂದರಲ್ಲಿ 100 ಕ್ಕೂ ಅಧಿಕ ಸಿಕ್ಸ್​ಗಳು ಮೂಡಿಬಂದಿವೆ.

ಇದಕ್ಕೂ ಮುನ್ನ 2023 ರಲ್ಲಿ ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್-ಆಸ್ಟ್ರೇಲಿಯಾ ತಂಡಗಳು ಒಟ್ಟು 74 ಸಿಕ್ಸ್​ಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಇಂಡೊ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಒಟ್ಟು 102 ಸಿಕ್ಸ್​ಗಳನ್ನು ಬಾರಿಸಲಾಗಿದ್ದು, ಈ ಮೂಲಕ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಸರಣಿಯೊಂದರಲ್ಲಿ ನೂರಕ್ಕೂ ಅಧಿಕ ಸಿಕ್ಸ್​ಗಳನ್ನು ಬಾರಿಸಿದ ವಿಶೇಷ ದಾಖಲೆಯನ್ನು ಭಾರತ ಮತ್ತು ಇಂಗ್ಲೆಂಡ್ ತಂಡಗಳು ನಿರ್ಮಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos