ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ 2003ರಂತೆ 23ರಲ್ಲೂ ಸೋಲು!

ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ 2003ರಂತೆ 23ರಲ್ಲೂ ಸೋಲು!

ಬೆಂಗಳೂರು: 2023ರ ವಿಶ್ವಕಪ್ ಫೈನಲ್‌ ಆರಂಭವಾಗಿದೆ. ಪ್ರಶಸ್ತಿಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಡಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಸತತ 10 ಪಂದ್ಯ ಗೆದ್ದು ಫೈನಲ್ ಪ್ರವೇಶಿಸಿದೆ. ಇನ್ನೊಂದೆಡೆ ಮೊದಲೆರಡು ಪಂದ್ಯ ಸೋತು ಅ ಬಳಿಕ ಸತತ ಎಂಟು ಪಂದ್ಯ ಗೆದ್ದು ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗುವ ಎಲ್ಲಾ ಅರ್ಹತೆ ಪಡೆದಿತ್ತು. ಕಳೆದ 10 ಪಂದ್ಯದಲ್ಲಿ ಚಾಂಪಿಯನ್ ಆಟವನ್ನೇ ಪ್ರದರ್ಶಿಸಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಅದೃಷ್ಠ ಕೈಕೊಟ್ಟಿತು. ಬ್ಯಾಟಿಂಗ್ ನೆಲಕಚ್ಚಿತು. ರನ್ ಕಡಿಮೆಯಾಯಿತು, ಬೌಲಿಂಗ್‌ನಲ್ಲಿ ನಿರೀಕ್ಷಿಸಿದಂತೆ ವಿಕೆಟ್ ಬೀಳಲಿಲ್ಲ. ಟ್ರಾವಿಸ್ ಅಬ್ಬರಕ್ಕೆ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ. ಕೊನೆಯದಾಗಿ ಭಾರತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಶರಣಾಯಿತು. ಕೋಟ್ಯಾಂತರ ಭಾರತೀಯರ ಟ್ರೋಫಿ ಕನಸು ನುಚ್ಚು ನೂರಾಯಿತು. 2003ರಂತೆ ಭಾರತಕ್ಕೆ ಮತ್ತೆ ಸೋಲಿನ ಆಘಾತ ಎದುರಾಯಿತು. ಲೀಗ್ ಹಂತದಲ್ಲಿ ಹರಸಾಹಸದ ಗೆಲುವಿನ ಮೂಲಕ ಸೆಮಿಫೈನಲ್ ಪ್ರವೇಶಿಸಿ, ಸೌತ್ ಆಫ್ರಿಕಾ ವಿರುದ್ಧ ಪ್ರಯಾಸದ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದ ಆಸೀಸ್ ದಾಖಲೆ ಬರೆದಿದೆ. ಫೈನಲ್ ಪಂದ್ಯದಲ್ಲಿ ಚಾಂಪಿಯನ್ ಆಟ ಪ್ರದರ್ಶಿಸಿ ಟ್ರೋಫಿ ಗೆದ್ದುಕೊಂಡಿದೆ. 6ನೇ ಐಸಿಸಿ ವಿಶ್ವಕಪ್ ಟ್ರೋಫಿ ಗೆದ್ದ ಆಸ್ಟ್ರೇಲಿಯಾ ಇತಿಹಾಸ ರಚಿಸಿದೆ. ಇತ್ತ ಭಾರತ ಕೊನೆಯ ಒಂದೇ ಒಂದು ತಪ್ಪಿನಿಂದ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

ಆಸೀಸ್ ಗೆಲುವಿಗೆ ಅಂತಿಮ 43 ಎಸೆತದಲ್ಲಿ ಕೇವಲ 2 ರನ್ ಅವಶ್ಯಕತೆ ಇತ್ತು. ಈ ವೇಳೆ 137 ರನ್ ಸಿಡಿಸಿ ಪಂದ್ಯದ ಲೆಕ್ಕಾಚಾರ ಬದಲಿಸಿದ ಟ್ರಾವಿಸ್ ವಿಕೆಟ್ ಪತನಗೊಂಡಿತು. ಇತ್ತ ಲಬುಶಾನೆ ಅಜೇಯ 58 ರನ್ ಸಿಡಿಸಿದರು. ಆಸ್ಟ್ರೇಲಿಯಾ 43 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. 6 ವಿಕೆಟ್ ಭರ್ಜರಿ ಗೆಲುವಿನ ಮೂಲಕ ಆಸ್ಟ್ರೇಲಿಯಾ ಐಸಿಸಿ ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿತು. ಭಾರತೀಯರ ಪ್ರಾರ್ಥನೆ ಫಲಿಸಲಿಲ್ಲ. ಟೀಂ ಇಂಡಿಯಾ ದಿಟ್ಟ ಹೋರಾಟ ನೀಡಿತ್ತು. ಇಡೀ ಟೂರ್ನಿಯಲ್ಲಿ ಟೀಂ ಇಂಡಿಯಾ ರೀತಿ ಯಾವ ತಂಡವೂ ಪ್ರದರ್ಶನ ನೀಡಿಲ್ಲ. ಆದರೆ ಫೈನಲ್ ಪಂದ್ಯದಲ್ಲಿ ಅದೃಷ್ಠ ಕೈಕೊಟ್ಟಿತು. 2013ರಿಂದ ಭಾರತ ಎದುರಿಸುತ್ತಿರುವ ಐಸಿಸಿ ಟ್ರೋಫಿ ಬರ ಮತ್ತೆ ಮುಂದುವರಿಯಿತು.

ಫ್ರೆಶ್ ನ್ಯೂಸ್

Latest Posts

Featured Videos