ಭಾರತ-ಪಾಕ್ ನಡುವೆ ಆರೋಗ್ಯಕರ ವಾತಾವರಣ ನಿರ್ಮಾಣವಾಗಲಿ: ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್

ಭಾರತ-ಪಾಕ್ ನಡುವೆ ಆರೋಗ್ಯಕರ ವಾತಾವರಣ ನಿರ್ಮಾಣವಾಗಲಿ: ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್

ನವದೆಹಲಿ, ಫೆ.28, ನ್ಯೂಸ್‍ ಎಕ್ಸ್ ಪ್ರೆಸ್: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಆರೋಗ್ಯಕರ ವಾತಾವರಣ ನಿರ್ಮಾಣವಾಗಲಿ ಮತ್ತು ಎರಡೂ ರಾಷಗಳು ಆರ್ಥಿಕ ಅಭಿವೃದ್ಧಿಯ ಕಾರ್ಯದಲ್ಲಿ ತೊಡಗಲಿ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬುಧವಾರ ಆಶಾವಾದ ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಸಂಘರ್ಷ ಏರ್ಪಟ್ಟಿರುವ ಸಂದರ್ಭದಲ್ಲಿ ಸಿಂಗ್ ಈ ಹೇಳಿಕೆಯನ್ನು ನೀಡಿದ್ದಾರೆ.

ನವದೆಹಲಿಯ ತೀನ್ ಮೂರ್ತಿ ಭವನ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಪ್ರಥಮ ಪಿ.ವಿ ನರಸಿಂಹ ರಾವ್ ರಾಷ್ಟ್ರೀಯ ನಾಯಕತ್ವ ಮತ್ತು ಜೀವಮಾನ ಸಾಧನೆ ಪ್ರಶಸ್ತಿಯನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯಿಂದ ಸ್ವೀಕರಿಸಿದ ನಂತರ ಮಾತನಾಡಿದ ಸಿಂಗ್ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.

ನಮ್ಮ ದೇಶಗಳು ಪರಸ್ಪರ ಸ್ವವಿನಾಶದ ಆತುರದಲ್ಲಿರುವ ಈ ಸಂದರ್ಭದಲ್ಲಿ ನನಗೆ ಪ್ರಶಸ್ತಿ ಲಭಿಸುತ್ತಿದೆ. ಈ ದಿನ ನನಗೆ ಬಹಳ ಮಹತ್ವದ್ದಾಗಿದೆ. ನಮ್ಮ ಮುಖ್ಯ ಉದ್ದೇಶ ದೇಶದ ಕೋಟ್ಯಂತರ ಜನರನ್ನು ಬಾಧಿಸುತ್ತಿರುವ ಬಡತನ ಮತ್ತು ರೋಗವನ್ನು ತೊಡೆದು ಹಾಕುವುದಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos