ಯುವ ಶಕ್ತಿಯಲ್ಲಿ ಭಾರತ ಎರಡನೇ ಸ್ಥಾನ

ಯುವ ಶಕ್ತಿಯಲ್ಲಿ ಭಾರತ ಎರಡನೇ ಸ್ಥಾನ

ಕೋಲಾರ: ಇಡೀ ವಿಶ್ವದಲ್ಲಿಯೇ ಯುವಶಕ್ತಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂದು ಕೋಲಾರ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾದ ಸೂಲೂರು ಎಂ ಆಂಜಿನಪ್ಪ ತಿಳಿಸಿದರು.
ನೆಹರು ಯುವ ಕೇಂದ್ರ ಆವರಣದಲ್ಲಿ ನೆಹರು ಯುವ ಕೇಂದ್ರದ ಸಂಸ್ಥಾಪನಾ ದಿನದ ಅಂಗವಾಗಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೆಹರು ಯುವ ಕೇಂದ್ರವು ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು ಯುವಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಹಾಗೂ ಯುವಜನತೆ ತಮ್ಮ ಜೀವನೋಪಾಯ ರೂಢಿಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿನ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಬೇಕು ಹಾಗೂ ಹೋಬಳಿ ಮಟ್ಟದಲ್ಲಿ ಕ್ರೀಡಾ ಕೂಟಗಳನ್ನು ಏರ್ಪಡಿಸುವ ಮೂಲಕ ಕ್ರೀಡೆಗಳಲ್ಲಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಮಾತನಾಡಿ, ಯುವಜನತೆಯು ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇಂದಿನ ಜಾಗತೀಕರಣದ ಯುಗದಲ್ಲಿ ಸಮಾಜದಲ್ಲಿ ಆಗುತ್ತಿರುವ ಹಲವಾರು ಬದಲಾವಣೆಗಳಿಗೆ ಯುವಜನತೆ ಹೊಂದಿಕೊಳ್ಳಬೇಕಿದೆ. ಕೋವಿಡ್ ೧೯ ಹಿನ್ನೆಲೆಯಲ್ಲಿ ಈ ಸವಾಲುಗಳು ಉಲ್ಬಣಗೊಂಡಿವೆ ಹಾಗಾಗಿ ಈ ಪರಿಸ್ಥಿತಿಯಲ್ಲಿ ಮಾನಸಿಕ ಸಂತುಲನವನ್ನು ಸಹ ಕಾಪಾಡಿಕೊಳ್ಳಬೇಕಾಗಿದೆ ಎಂದರು.
ರಕ್ತದಾನ ಮಾಡಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಕೋವಿಡ್-೧೯ ನ ಪ್ರತಿಜ್ಞಾ ವಿಧಿ ಬೋಧಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos