ಇಂದು ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯ!

ಇಂದು ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಚಿಕ್ಕ ಕ್ರೀಡೆಯಾಗಿ ಉಳಿದಿಲ್ಲ. ಒಂದು ದೊಡ್ಡ ಕ್ರೀಡೆಯಾಗಿ ಬೆಳೆದಿದೆ, ಕ್ರಿಕೆಟ್ ಎನ್ನುವುದು ನಮ್ಮ ಎಮೋಷನ್ ಆಗಿದೆ.
ಭಾರತ ಕ್ರಿಕೆಟ್ ತಂಡ ಹಾಗೂ ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ.
ಮೊದಲ ಎರಡು ಏಕದಿನ ಪಂದ್ಯದಂದ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಮಧ್ಯಾಹ್ನ 1:00 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು, 1:30ಕ್ಕೆ ಪಂದ್ಯ ಶುರುವಾಗಲಿದೆ. ಹಾಗಾದರೆ, ಈ ಪಂದ್ಯಕ್ಕೆ ಮಳೆಯ ಕಾಟ ಇದೆಯೇ ಎಂಬುದನ್ನು ನೋಡೋಣ.
ಮೊಹಾಲಿಯಲ್ಲಿ ಹಗಲಿನ ತಾಪಮಾನವು ಸುಮಾರು 32 ಡಿಗ್ರಿಗಳಷ್ಟು ಇರಬಹುದೆಂದು ನಿರೀಕ್ಷಿಸಲಾಗಿದೆ. ಮತ್ತು ರಾತ್ರಿಯಲ್ಲಿ 24 ಡಿಗ್ರಿಗಳಿಗೆ ಇಳಿಯುತ್ತದೆ. ತಡರಾತ್ರಿ ಗುಡುಗು ಸಹಿತ ಮಳೆ ಬೀಳುತ್ತದೆ. ಆದರೆ ಸಂಜೆಯ ವೇಳೆಗೆ ಮಳೆಯ ಭೀತಿ ಇಲ್ಲ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವುದು ಅನುಮಾನ.
ದೇಶದ ಇತರ ನಗರಗಳ ಮೈದಾನಗಳಿಗೆ ಹೋಲಿಸಿದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್‌ ಪಿಚ್ ಹೆಚ್ಚು ಹಸಿರಿನಿಂದ ಕೂಡಿದೆ. ಹೀಗಾಗಿ ವೇಗದ ಬೌಲರ್‌ಗಳು ಈ ಪಿಚ್‌ನಿಂದ ಹೆಚ್ಚಿನ ನೆರವನ್ನು ನಿರೀಕ್ಷಿಸಬಹುದು. ಅಲ್ಲದೆ ಬೌನ್ಸ್ ಕೂಡ ವೇಗಿಗಳಿಗೆ ನೆರವಾಗುವ ಸಾಧ್ಯತೆಯಿದೆ.
ಮೊಹಾಲಿ ಸ್ಟೇಡಿಯಂನಲ್ಲಿ ನಡೆದ ಕೊನೆಯ ಐದು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದು ಒಂದು ಪಂದ್ಯ ಮಾತ್ರ. ಉಳಿದ ನಾಲ್ಕು ಪಂದ್ಯಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ಟಾಸ್ ಗೆದ್ದ ನಾಯಕನು ಮೊದಲು ಬೌಲ್ ಅನ್ನು ಆಯ್ಕೆ ಮಾಡುವುದು ಉತ್ತಮ ಆಯ್ಕೆ.

ಫ್ರೆಶ್ ನ್ಯೂಸ್

Latest Posts

Featured Videos