ಭಾರತ- ಆಸ್ಟ್ರೇಲಿಯಾ ತಂಡಗಳು ಮುಖಾಮುಕಿ!

ಭಾರತ- ಆಸ್ಟ್ರೇಲಿಯಾ ತಂಡಗಳು ಮುಖಾಮುಕಿ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಒಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ ಕ್ರಿಕೆಟ್ ನಲ್ಲಿ ಹಲವಾರು ಮಂದಿ ಅವರ ಜೀವನವನ್ನು ಬದಲಾಯಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಚಿಕ್ಕ ಕ್ರೀಡೆಯಾಗಿ ಉಳಿದಿಲ್ಲ ಒಂದು ದೊಡ್ಡ ಕ್ರೀಡೆಯಾಗಿ ಬೆಳೆದಿದೆ, ಕ್ರಿಕೆಟ್ ಎನ್ನುವುದು ನಮ್ಮ ಎಮೋಷನ್ ಆಗಿದೆ
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 2023 ರ ಏಷ್ಯಾಕಪ್‌ ಗೆದ್ದು ಬೀಗಿದೆ. ಇದೀಗ ತಂಡವು ತನ್ನದೇ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿದೆ. ಇದಕ್ಕಾಗಿ ಬಿಸಿಸಿಐ ಕೂಡ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ನಂತರ ರೋಹಿತ್ ಪಡೆ ತವರಿನಲ್ಲಿ ಏಕದಿನ ವಿಶ್ವಕಪ್ ಅನ್ನು ಆಡಬೇಕಾಗಿದೆ. ಹೀಗಾಗಿ ಟೀಂ ಇಂಡಿಯಾ ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಬೇಕೆಂಬ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ. ಇನ್ನು ಈ ಸರಣಿಗೆ ಬಿಸಿಸಿಐ 2 ತಂಡಗಳನ್ನು ಆಯ್ಕೆ ಮಾಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಕನ್ನಡಿಗ ರಾಹುಲ್ ತಂಡವನ್ನು ಮುನ್ನಡೆಸಲಿದ್ದು, ಮೂರನೇ ಪಂದ್ಯದ ನಾಯಕತ್ವವನ್ನು ಎಂದಿನಂತೆ ರೋಹಿತ್ ನಿರ್ವಹಿಸಲಿದ್ದಾರೆ.
ಇನ್ನು ಉಭಯ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ. ಎರಡೂ ತಂಡಗಳು ಇಲ್ಲಿಯವರೆಗೆ 146 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಟೀಂ ಇಂಡಿಯಾ 54 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದು ಬೀಗಿದೆ. ಉಳಿದಂತೆ 10 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.
ಹಾಗೆಯೇ ಈ ಎರಡೂ ತಂಡಗಳು ಭಾರತದಲ್ಲಿ ಒಟ್ಟು 67 ಪಂದ್ಯಗಳನ್ನಾಡಿದ್ದು, ಇದರಲ್ಲಿ ಭಾರತ 30 ಪಂದ್ಯಗಳಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯಾ 32 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. 5 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇದರರ್ಥ ಭಾರತದಲ್ಲೂ ಹಾಗೂ ಭಾರತದ ಹೊರಗೂ ಟೀಂ ಇಂಡಿಯಾದೆದುರು ಆಸ್ಟ್ರೇಲಿಯಾ ಮೇಲುಗೈ ಸಾಧಿಸಿರುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos