ಭಾರತ ಹಾಗೂ ಬಾಂಗ್ಲಾದೇಶ: ಭಾರತ ಮೊದಲು ಬೌಲಿಂಗ್ ಆಯ್ಕೆ!

ಭಾರತ ಹಾಗೂ ಬಾಂಗ್ಲಾದೇಶ: ಭಾರತ ಮೊದಲು ಬೌಲಿಂಗ್ ಆಯ್ಕೆ!

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ 17ನೇ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯವು ಐತಿಹಾಸಿಕವಾಗಿದ್ದು, ಬಾಂಗ್ಲಾದೇಶ ತಂಡ ಬರೋಬ್ಬರಿ 25 ವರ್ಷಗಳ ಬಳಿಕ ಟೀಂ ಇಂಡಿಯಾ ವಿರುದ್ಧ ಭಾರತದ ನೆಲದಲ್ಲಿ ಏಕದಿನ ಪಂದ್ಯ ಆಡುತ್ತಿದೆ. ಬಾಂಗ್ಲಾದೇಶ 1998 ರಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ಟೀಂ ಇಂಡಿಯಾ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವನ್ನು ಆಡಿತ್ತು.

ಟಾಸ್ ಬಳಿಕ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದ್ದು, ಟೀಂ ಇಂಡಿಯಾ ಎಂದಿನಂತೆ ತನ್ನ ಗೆಲುವಿನ ಸಂಯೋಜನೆಯನ್ನು ಮುಂದುವರೆಸಿದೆ. ಅಂದರೆ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಬಾಂಗ್ಲಾದೇಶ ತಂಡದಲ್ಲಿ ಬದಲಾವಣೆಯಾಗಿದ್ದು,ಇಂಜುರಿಯಿಂದ ಬಳಲುತ್ತಿರುವ ಖಾಯಂ ನಾಯಕ ಶಕೀಬ್ ಅಲ್ ಹಸನ್ ಬದಲಿಗೆ ನಜ್ಮುಲ್ ಹೊಸೈನ್ ಶಾಂಟೊ ನಾಯಕತ್ವ ವಹಿಸಿದ್ದಾರೆ. ಹಾಗೆಯೇ ಬೌಲಿಂಗ್ ವಿಭಾಗದಲ್ಲಿಯೂ ತಸ್ಕಿನ್ ಅಹ್ಮದ್ ಬದಲಿಗೆ ನಸುಮ್ ಅಹ್ಮದ್ ಅವಕಾಶ ಪಡೆದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos