ಇಂದು ಭಾರತ-ಬಾಂಗ್ಲಾ ಹೈವೋಲ್ಟೇಜ್ ಪಂದ್ಯ!

ಇಂದು ಭಾರತ-ಬಾಂಗ್ಲಾ ಹೈವೋಲ್ಟೇಜ್ ಪಂದ್ಯ!

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಹ್ಯಾಟ್ರಿಕ್ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಗೆಲುವಿನ ಓಟ ಮುಂದುವರೆಸುವ ತವಕದಲ್ಲಿದ್ದರೆ, ಇತ್ತ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮಾತ್ರ ಕಂಡಿರುವ ಬಾಂಗ್ಲಾಕ್ಕೆ ಈ ಮ್ಯಾಚ್ ಮಹತ್ವದ್ದಾಗಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ವರ್ಗ ಎಂದು ಹೇಳಬಹುದು. ಪಂದ್ಯದುದ್ದಕ್ಕೂ ಬ್ಯಾಟರ್‌ಗಳಿಗೆ ಈ ಪಿಚ್ ಸಹಕಾರ ನೀಡುತ್ತದೆ. ಬೌಲರ್ಗಳಿಗೆ ಇಲ್ಲಿ ದೊಡ್ಡ ಸವಾಲು ಎನ್ನಬಹುದು. ಮೈದಾನದ ಗಾತ್ರ ಚಿಕ್ಕದಾಗಿದ್ದು, ಇಲ್ಲಿ ಕೇವಲ 7 ಏಕದಿನ ಪಂದ್ಯಗಳನ್ನು ಆಡಲಾಗಿದೆ. ಈ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 4 ರಲ್ಲಿ ಜಯಗಳಿದೆ. 2017ರಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 356/2 ದಾಖಲಿಸಿದ ಅತ್ಯಧಿಕ ಸ್ಕೋರ್ ಆಗಿದೆ. ಎರಡು ವರ್ಷಗಳ ನಂತರ ಇಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಪಿಚ್ ಹೇಗೆ ವರ್ತಿಸುತ್ತದೆ ಎಂಬ ಬಗ್ಗೆ ಕುತೂಹಲ ಕೂಡ ಇದೆ. ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡುವುದು ಉತ್ತಮ ಆಯ್ಕೆ.

ಫ್ರೆಶ್ ನ್ಯೂಸ್

Latest Posts

Featured Videos