ಭಾರತ ಹಾಗೂ ಇಂಗ್ಲೆಂಡ್‌ ಹೈವೋಲ್ಟೇಜ್ ಪಂದ್ಯ…!

ಭಾರತ ಹಾಗೂ ಇಂಗ್ಲೆಂಡ್‌ ಹೈವೋಲ್ಟೇಜ್ ಪಂದ್ಯ…!

ಬೆಂಗಳೂರು: ವಿಶ್ವಕಪ್‌ ಟೂರ್ನಿ ಅತ್ಯುತ್ತಮವಾಗಿ ಆರಂಭಗೊಂಡಿತ್ತು. ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಕುತೂಹಲ ಕೆರಳಿಸುತ್ತಿದೆ. ನಾಳೆ 29ನೇ ಪಂದ್ಯದಲ್ಲಿ ರೋಹಿತ್‌  ನಾಯಕತ್ವದ ಭಾರತ ತಂಡ ಬಟ್ಲರ್‌  ಅವರ ಇಂಗ್ಲೆಂಡ್‌ ತಂಡವನ್ನು ಎದುರಿಸಿತ್ತು. ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ  ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

ಈ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಕ್ರಿಕೆಟ್ ಕದನ ನಾಳೆ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ  ನಡೆಯಲ್ಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. 2023ರ ವಿಶ್ವಕಪ್‌ನಲ್ಲಿ ಭಾರತದ ಇದುವರೆಗಿನ ಪ್ರದರ್ಶನ ಅತ್ಯುತ್ತಮವಾಗಿದೆ. ಟೂರ್ನಿಯಲ್ಲಿ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಈ ಐದೂ ಪಂದ್ಯಗಳಲ್ಲಿ ಭಾರತ ಗೆದ್ದಿದೆ. ಇದರಿಂದಾಗಿ ಟೀಂ ಇಂಡಿಯಾ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಇಂಗ್ಲೆಂಡ್ ಇಲ್ಲಿಯವರೆಗೆ ತನ್ನ ಪ್ರದರ್ಶನದಿಂದ ಎಲ್ಲರನ್ನು ನಿರಾಶೆಗೊಳಿಸಿದ್ದು, ತಂಡವು ಐದರಲ್ಲಿ ಒಂದು ಗೆಲುವು ಮತ್ತು ನಾಲ್ಕು ಸೋಲುಗಳೊಂದಿಗೆ 9 ನೇ ಸ್ಥಾನದಲ್ಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos