ಭಾರತ-ಪಾಕಿಸ್ತಾನ : ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಭಾರತ-ಪಾಕಿಸ್ತಾನ : ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಬೆಂಗಳೂರು: ಪ್ರತಿಯೊಬ್ಬ ಕ್ರಿಕೆಟ್‌ ಅಭಿಮಾನಿಯೂ ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೆ ಕಾಯುತ್ತಾನೆ. ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಬದ್ಧವೈರಿಗಳ ನಡುವಿನ ಕಾದಾಟಕ್ಕೆ ವಿಶ್ವದ ಅತಿ ದೊಡ್ಡ ಕ್ರೀಡಾಂಗಣ ಸಾಕ್ಷಿಯಾಗಿದೆ. ಇಂದು ಬಹುನಿರೀಕ್ಷಿತ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ.
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿದೆ. ಈಗಾಗಲೇ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡ ಕಾರಣ ಪಾಕ್ ಬ್ಯಾಟಿಂಗ್ ಶುರು ಮಾಡಿದೆ. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳ ಎಲ್ಲ ಆಟಗಾರರು ಮೈದಾನದಲ್ಲಿ ನಿಂತು ರಾಷ್ಟ್ರಗೀತೆ ಹಾಡಿ ಗೌರವ ಸೂಚಿಸುವುದು ವಾಡಿಕೆ. ಅದರಂತೆ ಈ ಪಂದ್ಯದಲ್ಲಿ ಕೂಡ ರಾಷ್ಟ್ರಗೀತೆ ಪ್ರಸಾರ ಮಾಡಲಾಯಿತು.
ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ಒಂದಾಗಿರುವ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಭಾರತ-ಪಾಕ್ ಪಂದ್ಯಕ್ಕೆ ಹೌಸ್ಫುಲ್ ಆಗಿದೆ. ಸುಮಾರು 1 ಲಕ್ಷದ ಮೂವತ್ತು ಸಾವಿರ ಮಂದಿ ಕುಳಿತು ಪಂದ್ಯ ವೀಕ್ಷಿಸಬಹುದಾದ ಈ ಮೈದಾನದಲ್ಲಿ ಭಾರತದ ರಾಷ್ಟ್ರಗೀತೆ ಪ್ರಸಾರವಾದಾಗ ನೂತನ ದಾಖಲೆ ನಿರ್ಮಾಣವಾಯಿತು. ಭಾರತೀಯ ಆಟಗಾರರು ಮೈದಾನದಲ್ಲಿ ನಿಂತು ರಾಷ್ಟ್ರಗೀತೆಗೆ ಗೌರವ ಸೂಚಿಸುವಾಗ, ಮೈದಾನದಲ್ಲಿ ನೆರದಿದ್ದ 1 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ರಾಷ್ಟ್ರಗೀತೆಗೆ ದನಿಯಾದ ಅಪರೂಪದ ಘಟನೆ ನಡೆಯಿತು.
ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಡೆಂಗ್ಯೂಯಿಂದ ಬಳಲುತ್ತಿದ್ದ ಶುಭ್ಮನ್ ಗಿಲ್ ಗುಣಮುಖರಾಗಿದ್ದಾರೆ. ಇವರು ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅತ್ತ ಇಶಾನ್ ಕಿಶನ್ ಹೊರಗುಳಿದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮೊಹಮ್ಮದ್ ಶಮಿ ಅವರನ್ನು ಆಡಿಸುವ ಬಗ್ಗೆ ಮಾತುಗಳು ಕೇಳಿಬಂದಿದ್ದವು. ಆದರೆ, ರವಿಚಂದ್ರನ್ ಅಶ್ವಿನ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ಪಾಕ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos