ಸರಣಿ ಗೆದ್ದ ಟೀಮ್ ಇಂಡಿಯಾ.

ಸರಣಿ ಗೆದ್ದ ಟೀಮ್ ಇಂಡಿಯಾ.

ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಪಂದ್ಯವು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ಎದುರು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈಗಾಗಲೇ ಉಭಯ ತಂಡಗಳು  ತಲಾ ಒಂದು ಪಂದ್ಯ ಜಯಿಸಿದ್ದು, ಈ ಪಂದ್ಯ ಗೆದ್ದ ತಂಡವು ಸರಣಿ ಜಯಿಸಲಿದೆ. ಹೀಗಾಗಿ ಈ ಪಂದ್ಯವು ಸಾಕಷ್ಟು ಪೈಪೋಟಿಯಿಂದ ಕೂಡಿರುವ ಸಾಧ್ಯತೆಯಿದೆ.

ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ತಂಡವು ಭಾರತಕ್ಕೆ ಮೊದಲು ಬ್ಯಾಟಿಂಗ್ ಅವಕಾಶವನ್ನು ಕಲ್ಪಿಸಿತು.ಒಂದು ಹಂತದಲ್ಲಿ ಟೀಮ್ ಇಂಡಿಯಾ 49 ರನ್ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಸಮಯೋಚಿತ ಆಟವಾಡಿದ ಸಂಜು ಸ್ಯಾಮ್ಸನ್ 114 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳಿಂದ 108 ಗಳನ್ನು ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.ಇವರಿಗೆ ಸಾಥ್ ನೀಡಿದ ತಿಲಕ್ ವರ್ಮಾ ಹಾಗೂ ರಿಂಕು ಸಿಂಗ್ ಕ್ರಮವಾಗಿ 52 ಹಾಗೂ 38 ರನ್ ಗಳಿಸುವ ಮೂಲಕ ತಂಡವನ್ನು ಸುಸ್ಥಿತಿಗೆ ತಂದರು.ಅಂತಿಮವಾಗಿ ಟೀಮ್ ಇಂಡಿಯಾ 50 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಳ್ಳುವ ಮೂಲಕ 296 ರನ್ ಗಳಿಸಿತು.

ಟೀಮ್ ಇಂಡಿಯಾ ನೀಡಿದ 297 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು.ದಕ್ಷಿಣ ಆಫ್ರಿಕಾದ ಪರವಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೋನಿ ಜಿ ಜಾರ್ಜಿ 81 ರನ್ ಗಳಿಸುವ ಮೂಲಕ ಭಾರತ ತಂಡಕ್ಕೆ ಆಪಾಯಕಾರಿಯಾಗಿ ಪರಿಣಮಿಸಿದ್ದರು. ಆದರೆ ಆರ್ಶದೀಪ್ ಅವರ ಬೌಲಿಂಗ್ ದಾಳಿಗೆ ಎಲ್ಬಿಡಬ್ಲ್ಯು ಗೆ ಬಲಿಯಾದ ನಂತರ ಟೀಮ್ ಇಂಡಿಯಾಗೆ ಗೆಲುವು ಸರಾಗವಾಯಿತು.ಟೀಮ್ ಇಂಡಿಯಾದ ಪರವಾಗಿ ಆರ್ಶದೀಪ್ 4 ವಿಕೆಟ್ ಗಳನ್ನು ಹಾಗೂ ಆವೇಶ ಖಾನ್ ಹಾಗೂ ವಾಶಿಂಗ್ಟನ್ ಸುಂದರ್ ತಲಾ 2ವಿಕೆಟ್ ಗಳನ್ನು ಕಬಳಿಸುವ ಮೂಲಕ ಹರಿಣಗಳ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಇದರಿಂದಾಗಿ ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡವು 45.5 ಓವರ್ ಗಳಲ್ಲಿ 218 ರನ್ ಗಳಿಗೆ ಸರ್ವಪತನವನ್ನು ಕಾಣುವ ಮೂಲಕ 78 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.ಆ ಮೂಲಕ ಟೀಮ್ ಇಂಡಿಯಾ 2-1 ಅಂತರದಲ್ಲಿ ಏಕದಿನ ಸರಣಿ ಗೆಲುವು ಸಾಧಿಸಿತು.

ಫ್ರೆಶ್ ನ್ಯೂಸ್

Latest Posts

Featured Videos